ಮಾಲೂರು: ತಾಲ್ಲೂಕಿನ ನೊಸಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಲಾಟರಿ ಪ್ರಕ್ರಿಯೆ ಮೂಲಕ ಅಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ದೀಪಿಕಾ ಹಾಗೂ ಕಾಂಗ್ರೆಸ್ ಬೆಂಬಲಿತ ಶ್ರೀಈಶ್ವರಿ ಅವರು ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಬಿಇಒ ಕೃಷ್ಣಮೂರ್ತಿ ಘೋಷಿಸಿದರು.

ನೊಸಗೆರೆ ಪಂಚಾಯಿತಿಯಲ್ಲಿ 18 ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನ ಅನುಸೂಚಿತ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ವಿ.ಎಸ್. ಜಯಶ್ರೀ ಮತ್ತು ದೀಪಿಕಾ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಈಶ್ವರಿ ಮತ್ತು ಬಿ.ಎ. ಪ್ರಶಾಂತಿ ನಾಮಪತ್ರ ಸಲ್ಲಿಸಿದ್ದರು.

ಎರಡೂ ಕಡೆಯ ಅಭ್ಯರ್ಥಿಗಳು ತಲಾ 9 ಮತ ಪಡೆದರು. ಈ ಹಿನ್ನೆಲೆಯಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಲಾಯಿತು.ಪಿಡಿಒ ಭಾರತಿ, ತಾ.ಪಂ ಸದಸ್ಯೆ ಲಕ್ಷ್ಮಿ ರಾಜಪ್ಪ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಪುರ ನಾರಾಯಣಸ್ವಾಮಿ, ಕಾರ್ಯದರ್ಶಿ ಅಂಬರೀಷ್, ರಾಜಪ್ಪ, ರಮೇಶ್, ಚಿಕ್ಕಾಪುರ ನಾರಾಯಣಸ್ವಾಮಿ, ಶ್ರೀನಿವಾಸ್ ಹಾಗೂ ಸದಸ್ಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.