ಶುಕ್ರವಾರ, ಮಾರ್ಚ್ 31, 2023
32 °C

ಶಿಕ್ಷಕರ ಸಂಘದಿಂದ ಧನ ಸಹಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಲೂರು: ಪಟ್ಟಣದ ಶಿಕ್ಷಕರ ಕಚೇರಿ ಸಭಾಂಗಣದಲ್ಲಿ ಕಪ್ಪು ಶಿಲೀಂಧ್ರ ಸೋಂಕಿಗೆ ತುತ್ತಾಗಿರುವ ಸಿದ್ದನಹಳ್ಳಿ ಪ್ರಾಥಮಿಕ ಶಾಲಾ ಶಿಕ್ಷಕ ರಮೇಶ್ ಅವರ ಕುಟುಂಬಕ್ಕೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ₹ 25 ಸಾವಿರ ಚೆಕ್ ಅನ್ನು ಬಿಇಒ ಕೃಷ್ಣಮೂರ್ತಿ ವಿತರಿಸಿದರು.

ಕೋವಿಡ್ ಸೋಂಕಿಗೆ ತುತ್ತಾಗಿರುವ ಶಿಕ್ಷಕ ರಮೇಶ್ ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ ಹೆಚ್ಚು ಹಣದ ಅಗತ್ಯವಿದ್ದು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ನೆರವು ನೀಡಲಾಗುತ್ತಿದೆ ಎಂದು ಬಿಇಒ ಕೃಷ್ಣಮೂರ್ತಿ ತಿಳಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಆರ್. ನರಸಿಂಹ, ಪ್ರಧಾನ ಕಾರ್ಯದರ್ಶಿ ಮುನಿರಾಜು, ಭಗತ್ ಸಿಂಗ್, ವೆಂಕಟೇಶ್, ರಮೇಶ್, ಮುನಿರಾಜು, ಚಿನ್ನಪ್ಪ, ಚಂದ್ರಮ್ಮ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು