ಕೋಲಾರ: ನಗರದಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ಸೋಮವಾರ ಮುಸ್ಲಿಂ ಸಮುದಾಯ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ಗುಂಪು ಘರ್ಷಣೆ ಸಂಭವಿಸಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಕ್ಲಾಕ್ ಟವರ್ ಬಳಿ ಮೆರವಣಿಗೆ ಸಾಗುವಾಗ ಮಾತಿಗೆ ಮಾತು ಬೆಳೆದು ಮುಸ್ಲಿಂ ಸಮುದಾಯದ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿದೆ. ಈ ಸಂದರ್ಭದಲ್ಲಿ ಒಂದು ಗುಂಪು ಥಳಿಸಿದೆ.
ಸೈಯದ್ ಸಲ್ಮಾನ್, ಸೈಫ್, ಹುಸೇನ್ ಕಾಷಿಪ್, ಕಲೀಲ್ ಅಹಮದ್ ಎಂಬುವರಿಗೆ ಗಾಯವಾಗಿದ್ದು, ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಸ್ಥಳಕ್ಕೆ ಧಾವಿಸಿದ್ದು, ಗುಂಪುಗೂಡಿದ್ದ ಜನರನ್ನು ಚದುರಿಸಿದರು. ಬಳಿಕ ಮೆರವಣಿಗೆ ಮುಂದೆ ಸಾಗಿತು. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.