ಕೋಲಾರ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ ಮತ್ತು ಉತ್ಸವವನ್ನು ಫೆ.6 ರಂದು ಆಯೋಜಿಸಿದ್ದು, ಯಾವುದೇ ಲೋಪ ಉಂಟಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮ ಯಶಸ್ವಿಗೆ ಎಲ್ಲಾ ಅಧಿಕಾರಿಗಳು ಕೈಜೋಡಿಸಬೇಕು ಎಂದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲಾಡಳಿತ ಭವನದ ಭಾಂಗಣದಲ್ಲಿ ಈ ಉತ್ಸವವನ್ನು ನಡೆಸಲು ಉದ್ದೇಶಿಸಲಾಗಿದೆ. ವ್ಯವಸ್ಥಿತವಾಗಿ ಹಾಗೂ ಅಗತ್ಯ ಶಿಷ್ಟಾಚಾರದೊಂದಿಗೆ ಆಯೋಜಿಸಿ, ಯಶಸ್ವಿಗೊಳಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳ ಸಮಿತಿ ರಚಿಸಲಾಗಿದೆ. ಪ್ರತಿಯೊಂದು ಸಮಿತಿಗೂ ನಿರ್ದಿಷ್ಟ ಜವಾಬ್ದಾರಿ ವಹಿಸಲಾಗಿದೆ ಎಂದು ಹೇಳಿದರು.

ಅಧಿಕಾರಿಗಳು ತಮಗೆ ಸೂಚಿಸಿದ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸಬೇಕು. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಸರಿಯಾದ ಸಮಯಕ್ಕೆ ಕರೆತರಲು ಸಾರಿಗೆ ವ್ಯವಸ್ಥೆ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಕಾರ್ಯಾಗಾರದ ವೇಳೆ ಜಿಲ್ಲೆಯ ಜನಪದ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಜಿಲ್ಲೆ ಹಾಗೂ ತಾಲ್ಲೂಕುವಾರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಯಶೋಗಾಥೆಗಳ ಕಿರುಹೊತ್ತಿಗೆ, ಗ್ಯಾರೆಂಟಿ ಯೋಜನೆಗಳ ಬೀದಿ ನಾಟಕ ಪ್ರದರ್ಶನ ಹಾಗೂ ವಿಡಿಯೊ ಸಾಕ್ಷ್ಯಚಿತ್ರ ಪ್ರದರ್ಶಿಸಿಸಲು ಅನುಷ್ಠಾನ ಇಲಾಖೆ ಅಧಿಕಾರಿಗಳು ಹಾಗೂ ವಾರ್ತಾ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪಲು ಎಲ್ಲಾ ಇಲಾಖೆಗಳು ಮಾಹಿತಿ ಕೇಂದ್ರಗಳನ್ನು ತೆರೆಯಬೇಕು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಜಿಲ್ಲಾ ಹಾಗೂ ಎಲ್ಲಾ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರನ್ನು ಅಧಿಕೃತವಾಗಿ ಆಹ್ವಾನಿಸಬೇಕು. ಈ ಕಾರ್ಯಕ್ರಮ ಆಯೋಜಿಸುವ ಸಂಬಂಧ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಕಾರ್ಯಕ್ರಮದಲ್ಲಿ ಜನರಿಗೆ ಆಸನ ವ್ಯವಸ್ಥೆ, ಕುಡಿಯುವ ನೀರು, ಆಹಾರ, ಸಾರಿಗೆ, ವೇದಿಕೆ ಹೂವಿನ ಅಲಂಕಾರ, ಪ್ರದರ್ಶನ ಮಳಿಗೆ ಸ್ಥಾಪನೆ ಹಾಗೂ ಇನ್ನಿತರ ವ್ಯವಸ್ಥೆಗಳನ್ನು ವ್ಯವಸ್ಥಿತವಾಗಿ ಮಾಡುವಂತೆ ಸಂಬಂಧಪಟ್ಟವರಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಂ.ಮಂಗಳಾ, ಉಪಕಾರ್ಯದರ್ಶಿ ಟಿ.ಕೆ.ರಮೇಶ್, ಉಪವಿಭಾಗಾಧಿಕಾರಿ ಜಂಬಗಿ ರೇಣುಕಾ ಪ್ರಸಾದ್ ದಿಲೀಪ್, ಜಿಲ್ಲಾ ಕೈಗಾರಿಕೆ ಕೇಂದ್ರ ಉಪನಿರ್ದೇಶಕ ರವಿಚಂದ್ರನ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಯಾವುದೇ ಲೋಪ ಉಂಟಾಗದಂತೆ ಎಚ್ಚರಿಕೆ ವಹಿಸಿ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜನೆ ಜಿಲ್ಲಾ ಉಸ್ತುವಾರಿ ಸಚಿವ, ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷರು ಭಾಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.