ಬಂಗಾರಪೇಟೆ: ಐದು ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗುತ್ತಿದೆ. ಈಗಾಗಲೇ 95ರಷ್ಟು ಫಲಾನುಭವಿಗಳು ಯೋಜನೆ ಪಡೆಯುತ್ತಿದ್ದಾರೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್.ಎ.ಪಾರ್ಥಸಾರಥಿ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳು ಎಷ್ಟರ ಮಟ್ಟಿಗೆ ಅನುಷ್ಠಾನಗೊಳಿಸಲಾಗುತ್ತಿದೆ. ಲೋಪದೋಷ ಇದೆಯೇ? ಅರ್ಹರು ಯೋಜನೆಯಿಂದ ವಂಚಿತರಾಗಿದ್ದಾರೆಯೇ ಎಂಬುದನ್ನು ಪರಿಶೀಲನೆ ನಡೆಸಲಾಯಿತು.

ಶಕ್ತಿ ಯೋಜನೆ ಯಶಸ್ವಿಯಾಗಿದೆ. ಈ ಯೋಜನೆ ಗ್ರಾಮೀಣ ಭಾಗದ ಬಡ, ಮಧ್ಯಮ ವರ್ಗದ ಉದ್ಯೋಗಸ್ಥ ಮಹಿಳೆಯರಿಗೆ ಹೆಚ್ಚಿನ ಅನುಕೂಲವಾಗಿದೆ. ನಿರುದ್ಯೋಗ ಯುವಕರಿಗೆ ನೀಡುವ ಯುವನಿಧಿ ಬಳಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಯುವಕ ಮತ್ತು ಯುವತಿಯರಿಗೆ ಉಪಯುಕ್ತವಾಗಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ತಾಲ್ಲೂಕಿನ ಯುವಕರು ಉನ್ನತ ಹುದ್ದೆಗಳಿಗೆ ಏರಬೇಕೆಂದು ಸಲಹೆ ನೀಡಿದರು.

ಗ್ಯಾರಂಟಿ ಯೋಜನೆಗಳ ಕಾರ್ಯ ನಿರ್ವಾಹಕ ಅಧಿಕಾರಿ ಎಚ್.ರವಿ ಕುಮಾರ್, ಉಪಾಧ್ಯಕ್ಷ ಸೈಯದ್ ಇಮಾದಾದ್ ವುಲ್ಲಾ, ಸದಸ್ಯರಾದ ವಿನೋದ, ವಿ.ಶಂಕರ್, ಬಿ.ಜಿ ವಿವೇಕಾನಂದ, ಬೀರಪ್ಪ, ನಾರಾಯಣಸ್ವಾಮಿ, ರೇಣುಕಾ,ಎಂ.ಸುಜಾತ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮುನಿರಾಜು, ಆಹಾರ ನೀರಿಕ್ಷಕ ರಘುರಾಮ್ ಸಿಂಗ್, ಕೈಗಾರಿಕೆ ಇಲಾಖೆ ಮುನಿಕೃಷ್ಣ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.