ಬಂಗಾರಪೇಟೆ: ಅತಿಥಿ ಶಿಕ್ಷಕರಿಗೆ ಸರ್ಕಾರ ವೇತನ ನೀಡುತ್ತಿಲ್ಲ. ಅವರ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಕಾಯಂ ಶಿಕ್ಷಕರಿಗೂ ಸಕಾಲಕ್ಕೆ ವೇತನ ನೀಡದಿರುವುದು ಬಿಜೆಪಿ ಆಡಳಿತಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶೈಕ್ಷಣಿಕವಾಗಿ ತಾಲ್ಲೂಕು ಈ ಬಾರಿ ಎರಡನೇ ಸ್ಥಾನದಲ್ಲಿರುವುದು ಶ್ಲಾಘನೀಯ. ಗ್ರಾಮೀಣ ಭಾಗದ ಕನಮನಹಳ್ಳಿ, ಗುಲ್ಲಹಳ್ಳಿ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಆದರೆ ಪಟ್ಟಣದ ಶಾಲೆಗಳಲ್ಲಿ ನಿರೀಕ್ಷೆಯಂತೆ ಬಂದಿಲ್ಲ. ಈ ಬಗ್ಗೆ ಶಿಕ್ಷಕರು ಕಾಳಜಿ ವಹಿಸಬೇಕು ಎಂದರು.
ಶಿಕ್ಷಕರ ಸಂಘದ ಚುನಾವಣೆ ಆ ಚುನಾವಣೆಗೆ ಮಾತ್ರ ಸೀಮಿತವಾಗಬೇಕು. ಯಾರೇ ಗೆಲ್ಲಲಿ ಎಲ್ಲರೂ ಒಗ್ಗಟ್ಟಾಗಿರಬೇಕು. ಪರಸ್ಪರ ಮನಸ್ತಾಪ ಇರಕೂಡದು ಎಂದು ಸಲಹೆ ಮಾಡಿದರು.
33 ನಿವೃತ್ತ ಶಿಕ್ಷಕರಿಗೆ ಸನ್ಮಾನ ಮಾಡಲಾಯಿತು.
ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹದೇವಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ವೆಂಕಟೇಶಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಪಿ.ಕೆಂಪಯ್ಯ, ಸರ್ಕಾರಿ ನೌಕರರ ಸಂಘದ ಅಪ್ಪಯ್ಯಗೌಡ, ಕಾರ್ಯದರ್ಶಿ ಎಲ್.ರಾಜಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆಂಜನೇಯಗೌಡ, ಪ್ರೌಢಶಾಲಾ ಶಿಕ್ಷಕರ ಸಂಘದ ವೆಂಕಟೇಶಗೌಡ, ಪ್ರೇಮಲತಾ, ಸಬ್ಇನ್‌ಸ್ಪೆಕ್ಟರ್ ಜಗದೀಶ್ ರೆಡ್ಡಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.