ಸೋಮವಾರ, ಮೇ 23, 2022
20 °C

ಬಂದೂಕು ತರಬೇತಿ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆಜಿಎಫ್‌: ಬಂಗಾರಪೇಟೆ ಮತ್ತು ಕೆಜಿಎಫ್ ತಾಲ್ಲೂಕುಗಳ ನಾಗರಿಕ ಬಂದೂಕು ತರಬೇತಿ ಕಾರ್ಯಕ್ರಮವನ್ನು ಏಪ್ರಿಲ್‌ 18 ರಿಂದ 24 ವರೆಗೆ ಏರ್ಪಡಿಸಲಾಗಿದೆ.

ಕೆಜಿಎಫ್‌ ಪೊಲೀಸ್ ವತಿಯಿಂದ ಚಾಂಪಿಯನ್‌ ರೀಫ್ಸ್‌ ಡಿಎಆರ್ ಬಳಿ ತರಬೇತಿ ನಡೆಯಲಿದೆ. ತರಬೇತಿ ಪಡೆಯಲು ಇಚ್ಛಿಸುವವರು ಉತ್ತಮ ಗುಣ ನಡತೆ ಪ್ರಮಾಣ ಪತ್ರವನ್ನು ಸಂಬಂಧಿಸಿದ ಪೊಲೀಸ್ ಠಾಣೆಯಿಂದ ಪಡೆದು ಅರ್ಜಿ ಸಲ್ಲಿಸಬೇಕು.

ಡಿಎಆರ್ ಕಚೇರಿಯಲ್ಲಿ ಅರ್ಜಿ ವಿತರಣೆ ಮಾಡಲಾಗುತ್ತಿದೆ. ನಾಗರಿಕರು ಈ ಅವಕಾಶವನ್ನು ಉಪಯೋಗಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಧರಣಿದೇವಿ ಮಾಲಗತ್ತಿ ಕೋರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.