ಭಾನುವಾರ, ಆಗಸ್ಟ್ 14, 2022
21 °C

ಎಚ್‌ಡಿಕೆ ಹುಟ್ಟುಹಬ್ಬ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಸಾಲ ಮನ್ನಾ ಮಾಡುವ ಗಟ್ಟಿ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾತ್ರ ಮಾಡಲು ಸಾಧ್ಯ’ ಎಂದು ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಹೇಳಿದರು.

ನಗರದ ಸಾಯಿಬಾಬ ದೇವಾಲಯದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ 61ನೇ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ನೆರವೇರಿಸಿ ಮಾತನಾಡಿದರು.

ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಗೋಪಾಲಕೃಷ್ಣ ಮಾತನಾಡಿ, ಸದಾ ರೈತರ ಬಗ್ಗೆಯೇ ಚಿಂತಿಸುವ ಏಕೈಕ ನಾಯಕ ಕುಮಾರಸ್ವಾಮಿ. ಅನಾರೋಗ್ಯದ ನಡುವೆಯೂ ಪಕ್ಷದ ಸಂಘಟನೆ ಹಾಗೂ ರಾಜ್ಯದ ಜನರ ಹಿತಕ್ಕಾಗಿ ದುಡಿಯುವ ಅವರು ಕಾರ್ಯಕರ್ತರಿಗೆ ಆದರ್ಶವಾಗಿದ್ದಾರೆ. ದೇವೇಗೌಡರ ನಾಯಕತ್ವದಲ್ಲಿ ಮತ್ತೆ ರಾಜ್ಯದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿ ಎಂದು ಆಶಿಸಿದರು.

ಜೆಡಿಎಸ್ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ಪಕ್ಷವನ್ನು ಪ್ರತಿಯೊಬ್ಬ ಕಾರ್ಯಕರ್ತರು ಸಂಘಟಿಸುವ ಸಂಕಲ್ಪ ಮಾಡುವ ಮೂಲಕ ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಕೊಡುಗೆ ನೀಡಬೇಕು ಎಂದರು.

ಎಪಿಎಂಸಿ ಮಾಜಿ ನಿರ್ದೇಶಕಿ ರಾಜೇಶ್ವರಿ, ನಗರಸಭೆ ಅಧ್ಯಕ್ಷೆ ಶ್ವೇತಾ, ಉಪಾಧ್ಯಕ್ಷ ಪ್ರವೀಣ್ ಗೌಡ, ಸದಸ್ಯ ರಾಕೇಶ್, ಮುಖಂಡರಾದ ಹರೀಶ್‌ಗೌಡ, ಗೋಪಾಲಪ್ಪ, ಬಣಕನಹಳ್ಳಿ ನಟರಾಜ್, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಾಬು ಮೌನಿ, ವಕೀಲರ ಘಟಕದ ಎಂ. ಮುನೇಗೌಡ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.