ಸಂಘ ರಚನೆ:ಮುಖ್ಯೋಪಾದ್ಯಾಯರು ಸದಸ್ಯತ್ವ ಪಡೆದುಕೊಳ್ಳಲು ಮನವಿ

7

ಸಂಘ ರಚನೆ:ಮುಖ್ಯೋಪಾದ್ಯಾಯರು ಸದಸ್ಯತ್ವ ಪಡೆದುಕೊಳ್ಳಲು ಮನವಿ

Published:
Updated:
Deccan Herald

ಕೋಲಾರ: ‘ಮುಖ್ಯೋಪಾದ್ಯಾಯರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಘ ರಚಿಸಲಾಗಿದ್ದು, ಸಂಘಟನೆಗೆ ಸಹಕಾರ ನೀಡಬೇಕು’ ಎಂದು ಪ್ರಾಥಮಿಕ ಶಾಲಾ ಮುಖ್ಯೋಪಾದ್ಯಾಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಶ್ರೀನಿವಾಸ್ ಕೋರಿದರು.

ಪ್ರಾಥಮಿಕ ಶಾಲಾ ಮುಖ್ಯೋಪಾದ್ಯಾಯರ ಸಂಘದಿಂದ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಸದಸ್ಯತ್ವ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿ, ‘ಮುಖ್ಯೋಪಾದ್ಯಾಯರು ಸದಸ್ಯತ್ವ ಪಡೆದುಕೊಳ್ಳುವ ಮೂಲಕ ಹಕ್ಕು ಬಾದ್ಯತೆಗಳ ಜತೆಗೆ ಸಂಘಟನೆಗೆ ಒತ್ತು ನೀಡಬೇಕು’ ಎಂದು ತಿಳಿಸಿದರು.

‘ಪ್ರಾಥಮಿಕ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಶಾಲಾ ನಾಯಕತ್ವ ವಹಿಸಿರುವ ಮುಖ್ಯೋಪಾದ್ಯಾಯರು ಆ ಶಾಲೆಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರ ನೀಡಬೇಕು. ಸಮಸ್ಯೆಗಳಿಗೆ ಪರಿಹಾರಕಂಡುಕೊಳ್ಳಲು ಸಂಘಟನೆ ಅಗತ್ಯ. ಹೀಗಾಗಿ ಸಂಘಟನೆಯನ್ನು ಅಸ್ತ್ರ ಮಾಡಿಕೊಳ್ಳಬೇಕು’ ಎಂದು ಅಭಿಪ್ರಾಯಪಟ್ಟರು.

‘ಜಿಲ್ಲೆಯ ಮುಖ್ಯೋಪಾದ್ಯಾಯರು ಸದಸ್ಯತ್ವ ಆಂದೋಲನದಲ್ಲಿ ತಮ್ಮನ್ನೇ ತಾವು ತೊಡಗಿಸಿಕೊಳ್ಳಬೇಕು. ಮುಂದಿನ ವಾರದಿಂದ ಜಿಲ್ಲೆಯ ಪ್ರತಿ ತಾಲ್ಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಂಘಟನೆಯ ಬಲವರ್ಧನೆಗೆ ಒತ್ತು ನೀಡಲಾಗುವುದು’ ಎಂದು ತಿಳಿಸಿದರು.

‘ರಾಜ್ಯದಲ್ಲಿಯೇ ಜಿಲ್ಲಾ ಸಂಘಟನೆ ಬಲಿಷ್ಠವಾಗಿದ್ದು, ವಿದ್ಯಾರ್ಥಿಗಳ ಸರ್ವತೋಮುಖ ಪ್ರಗತಿಗೆ ತಮ್ಮನ್ನೇ ಅರ್ಪಿಸಿಕೊಳ್ಳಬೇಕು. ಇತರ ಶಿಕ್ಷಕರಿಗೆ ಮಾದರಿಯಾಗಬೇಕು’ ಎಂದು ಸಂಘದ ರಾಜ್ಯ ಘಟಕದ ಮುಖಂಡ ಆರ್.ಶ್ರೀನಿವಾಸನ್ ಹೇಳಿದರು.

ಯಲವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಯನಿ ಭಾಗ್ಯಲಕ್ಷ್ಮಮ್ಮ, ಪ್ರಧಾನ ಕಾರ್ಯದರ್ಶಿ ಬಿ.ಶ್ರೀನಿವಾಸ್, ಉಪಾಧ್ಯಕ್ಷರಾದ ಕೆ.ಶ್ರೀನಿವಾಸ್, ಜೆ.ಎಂ.ಜಯಲಕ್ಷ್ಮಮ್ಮ, ಬಿ.ಎಂ.ಚಾಮುಂಡೇಶ್ವರಿದೇವಿ, ಕೋಶಾಧ್ಯಕ್ಷ ಬಹದ್ದೂರ್ ಸಾಬ್, ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ಹಾಜರಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !