ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಬೇಕು: ಡಾ.ಟಿ.ಎ. ಮಂಜುನಾಥ

Last Updated 21 ಸೆಪ್ಟೆಂಬರ್ 2022, 5:25 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ‘ಗ್ರಾಮೀಣರು ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಬೇಕು. ಅದಕ್ಕೆ ಪೂರಕವಾಗಿ ಪ್ರತಿಯೊಬ್ಬರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಂಸ್ಥೆಯ ಉಪನ್ಯಾಸಕ ಡಾ.ಟಿ.ಎ. ಮಂಜುನಾಥ ಹೇಳಿದರು.

ತಾಲ್ಲೂಕಿನ ಗುಮ್ಮರೆಡ್ಡಿಪುರ ಗ್ರಾಮದಲ್ಲಿ ಆರೋಗ್ಯ ಇಲಾಖೆಯಿಂದ ಮಂಗಳವಾರ ಏರ್ಪಡಿಸಿದ್ದ ಸೊಳ್ಳೆ ಮತ್ತು ತಂಬಾಕು ನಿಯಂತ್ರಣ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿ, ಯುವಜನರು ದುಶ್ಚಟಗಳಿಂದ ದೂರವಿರಬೇಕು. ಧೂಮಪಾನ, ಮದ್ಯಪಾನದಂತಹ ಚಟಗಳಿಗೆ ಬಲಿಯಾಗಬಾರದು. ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ಪರಿಸರ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಸೊಳ್ಳೆ ಸಾಂಕ್ರಾಮಿಕ ರೋಗ ಹರಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಆದ್ದರಿಂದ ಅವುಗಳ ನಿಯಂತ್ರಣಕ್ಕೆ ಸಾಂಘಿಕ ಪ್ರಯತ್ನ ಮಾಡಬೇಕು. ಜನವಸತಿ ಪ್ರದೇಶದಲ್ಲಿ ಸ್ವಚ್ಛತೆ ಪಾಲಿಸುವುದರ ಮೂಲಕ ಸೊಳ್ಳೆ ನಿಯಂತ್ರಣ ಮಾಡಬೇಕು ಎಂದರು.

ಆರೋಗ್ಯ ಶಿಕ್ಷಣಾಧಿಕಾರಿಗಳಾದ ಖುರ್ಷಿದ್ ಬೇಗಂ, ಟಿ.ಕೆ. ಮಂಜುಳಾ, ಉಪನ್ಯಾಸಕ ತನ್ವೀರ್ ಅಹ್ಮದ್ ತಾಯಿ– ಮಕ್ಕಳ ಆರೋಗ್ಯ ಕುರಿತು ಮಾತನಾಡಿದರು. ಮಗುವಿಗೆ ಎದೆಹಾಲಿನ ಮಹತ್ವ ಕುರಿತು ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ಸ್ಥಳೀಯ ಶಾಲೆ ವಿದ್ಯಾರ್ಥಿಗಳಿಂದ ಸೊಳ್ಳೆ ನಿಯಂತ್ರಣ ಹಾಗೂ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮ ಕುರಿತು ಜಾಗೃತಿ ಜಾಥಾ ಏರ್ಪಡಿಸಲಾಗಿತ್ತು.

ಮುಖಂಡ ವೆಂಕಟರಮಣ ರೆಡ್ಡಿ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ವೆಂಕಟೇಶ್, ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿ ಶೋಭಾ, ಸಮುದಾಯ ಆರೋಗ್ಯಾಧಿಕಾರಿ ಶ್ರೀನಿವಾಸ್, ಆಶಾ ಕಾರ್ಯಕರ್ತೆ ಭಾರತಿ, ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT