ಮುಳಬಾಗಿಲು: ಮೆದುಳು ಜ್ವರ ಮಾರಣಾಂತಿಕವಾಗಿದ್ದು, ಈ ಜ್ವರದ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಸಿ. ಸುಗುಣಾ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ತಾಲ್ಲೂಕು ಆರೋಗ್ಯ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಮೆದುಳು ಜ್ವರ ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜನತೆಗೆ ಮೆದುಳು ಜ್ವರದ ಬಗ್ಗೆ ತಿಳಿವಳಿಕೆ ಇಲ್ಲದ ಕಾರಣ ಪ್ರಾಣಾಪಾಯ ಸಂಭವಿಸುತ್ತಿವೆ. ಆದ್ದರಿಂದ ಪ್ರತಿಯೊಬ್ಬರೂ ಜ್ವರದ ಲಕ್ಷಣಗಳು ಕಂಡು ಬಂದರೆ ವೈದ್ಯರನ್ನು ಸಂಪರ್ಕಿಸಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.

ಸಾಮಾನ್ಯವಾಗಿ ಸೆಪ್ಟೆಂಬರ್ ತಿಂಗಳಿನಿಂದ ಡಿಸೆಂಬರ್ವರೆಗೂ ಮೆದುಳು ಜ್ವರ ಕಾಣಿಸಿಕೊಳ್ಳುವ ಕಾಲಾವಧಿಯಾಗಿದೆ. ಆದ್ದರಿಂದ ಜ್ವರ, ಕತ್ತು ಬಿಗಿಯುವುದು, ಮೈನಡುಕ ಸೇರಿದಂತೆ ಇತರೆ ಯಾವುದೇ ರೀತಿಯ ಲಕ್ಷಣಗಳು ಕಂಡು ಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಸಲಹೆ ನೀಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸರ್ವೇಶ್ ಮಾತನಾಡಿ ಮೆದುಳು ಜ್ವರಕ್ಕಾಗಿ ಸರ್ಕಾರದಿಂದ ಚಿಕಿತ್ಸೆ ನೀಡುತ್ತಿದ್ದು ಪೋಷಕರು ತಮ್ಮ ಮಕ್ಕಳಿಗೆ 9 ಮತ್ತು 12ನೇ ತಿಂಗಳಲ್ಲಿ ಮೆದುಳು ಜ್ವರ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು. ಇದಕ್ಕೆ ಜಿಲ್ಲಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದ್ದು ಸಾರ್ವಜನಿಕರು ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಡಾ.ಇ. ಸರ್ವೇಶ್, ನರೇಗಾ ಸಹಾಯಕ ನಿರ್ದೇಶಕ ರವಿಚಂದ್ರ, ಹಿರಿಯ ಪ್ರಾಥಮಿಕ ಸುರಕ್ಷಾಧಿಕಾರಿ ಆರ್.ರಾಮಲಕ್ಷ್ಮಮ್ಮ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರೇಣುಕಾದೇವಿ, ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಚಿದಾನಂದ, ವಂಶಿಕೃಷ್ಣ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.