ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡೆಯಿಂದ ಆರೋಗ್ಯ ವೃದ್ಧಿ

Last Updated 16 ಜನವರಿ 2020, 14:03 IST
ಅಕ್ಷರ ಗಾತ್ರ

ಕೋಲಾರ: ‘ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಸೊಗಡಿನ ಕ್ರೀಡೆಗಳು ಅಳಿವಿನ ಹಂಚಿನಲ್ಲಿದೆ’ ಎಂದು ಬಂಗಾರಪೇಟೆ ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಮುನಿಸ್ವಾಮಿರೆಡ್ಡಿ ವಿಷಾದ ವ್ಯಕ್ತಪಡಿಸಿದರು.

ಸಂಕ್ರಾಂತಿ ಹಬ್ಬದ ಪ್ರಯುಕ್ತ ತಾಲ್ಲೂಕಿನ ಹೋಳೂರು ಗ್ರಾಮದಲ್ಲಿ ಕರಗದಮ್ಮ ಕಲಾ ಸಂಸ್ಥೆ, ನವದೃಷ್ಠಿ ಡೆವಲಪ್‌ಮೆಂಟ್ ಟ್ರಸ್ಟ್ ಹಾಗೂ ಸ್ವಾಮಿ ವಿವೇಕಾನಂದ ಸಮುದಾಯ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಬುಧವಾರ ರಾತ್ರಿ ಆಯೋಜಿಸಿದ್ದ ಸಂಕ್ರಾಂತಿ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಗ್ರಾಮೀಣ ಭಾಗದಲ್ಲಿ ಕ್ರೀಡೆಗಳನ್ನು ಆಯೋಜಿಸುವ ಮೂಲಕ ಶಕ್ತಿ ತುಂಬಬೇಕು. ಗ್ರಾಮೀಣ ಕ್ರೀಡೆಗಳು ಮನುಷ್ಯನಿಗೆ ಆರೋಗ್ಯ ವೃದ್ಧಿಸಲು ಸಹಕಾರಿಯಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.

‘ದೇಶದಲ್ಲಿ ಹೆಚ್ಚಿನ ಮಹತ್ವ ಸಂಕ್ರಾಂತಿ ಹಬ್ಬಕ್ಕೆ ಇದೆ. ಸುಗ್ಗಿ ಕಾಲದಲ್ಲಿ ಆಚರಣೆ ಮಾಡಲಾಗುತ್ತಿದೆ. ಜೀವಿತಾವಧಿಯಲ್ಲಿ ಕಳೆದುಹೋದ ಕಾಲ ಎಂದಿಗೂ ಮರುಕಳಿಸುವುದಿಲ್ಲ. ಸಮಾಜಕ್ಕೆ ನಾವು ಮಾಡಿರುವ ಸೇವೆಯಷ್ಟೇ ಶಾಶ್ವತವಾಗಿರುತ್ತದೆ’ ಎಂದರು.

‘ಗ್ರಾಮೀಣ ಭಾಗದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿರುವುದು ಸಂತಸದ ವಿಚಾರವಾಗಿದೆ. ತಾನೂ ೧೩ ವರ್ಷ ಶಿಕ್ಷಣ ಕ್ಷೇತ್ರ ಸೇರಿದಲ್ಲಿ ಸೇವೆ ಸಲ್ಲಿಸಿದ್ದು, ಜೀವನದಲ್ಲಿ ಅಸಾಧ್ಯವಾದುದು ಯಾವುದೂ ಇಲ್ಲ. ಸೇವೆ ಮಾಡಿರುವ ಕೆಲಸ ಅದ್ಬುತವಾಗಿದ್ದರೆ ಏನು ಬೇಕಾದರೂ ಸಾಧಿಸಬಹುದು’ ಎಂದು ಹೇಳಿದರು.

‘ಕೆಎಎಸ್ ಮಾಡಿ ಉತ್ತಮ ಸೇವೆ ನೀಡಬೇಕು ಎನ್ನುವ ಉದ್ದೇಶದಿಂದ ಇದೀಗ ತಹಶೀಲ್ದಾರ್ ಆಗಿ ಆಯ್ಕೆಯಾಗಿದ್ದು, ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣ ಕೊಡಿಸಿ ಉತ್ತಮ ಜೀವನಶೈಲಿಯನ್ನು ಬೆಳೆಸಬೇಕು’ ಎಂದು ಪೋಷಕರಿಗೆ ಸಲಹೆ ನೀಡಿದರು.

ಚಿಕ್ಕಬಳ್ಳಾಪುರ ಲೋಕಾಯುಕ್ತ ಇನ್ಸ್‌ಪೆಕ್ಟರ್ ಹರೀಶ್ ಮಾತನಾಡಿ, ‘ಮನುಷ್ಯನಲ್ಲಿ ಛಲವೆಂದು ಇದ್ದರೆ ಗುರಿ ಸಾಧನೆಗೆ ಸಹಾರಿಯಾಗುತ್ತದೆ, ಬಡತನ ಯಾವುದಕ್ಕೂ ಅಡ್ಡಿ ಬರುವುದಿಲ್ಲ’ ಎಂದು ತಿಳಿಸಿದರು.

‘ಹಳ್ಳಿಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಹೆಚ್ಚಾಗಿ ನಡೆಸಲು ಮಕ್ಕಳಿಗೆ ಪೋಷಕರು ಪ್ರೋತ್ಸಾಹಿಸಿ ನಾಡು, ನುಡಿ, ಸಂಸ್ಕೃತಿಯನ್ನು ಬೆಳೆಸಬೇಕು’ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮಕ್ಕಳು, ಸರ್ಕಾರಿ ಕುವೆಂಪು ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಹಾಗೂ ಸ್ಥಳೀಯ ಪ್ರತಿಭೆಗಳಿಂದ ಕಂಸಾಳೆ, ಕೋಲಾಟ, ದೇಶಭಕ್ತಿ ಗೀತಗೆಳು ಮೂಡಿಬಂದವು. ತುಮಕೂರಿನ ಕೂಚುಪುಡಿ ಕಲಾ ತಂಡದಿಂದ ನೃತ್ಯ, ಸೂಲಿಬೆಲೆ ಆನಂದ್ ತಂಡದಿಂದ ನೃತ್ಯ, ಅಣ್ಣೇನಹಳ್ಳಿಯ ಪ್ರತೀಶ ಶಾಸ್ತ್ರೀಯ ನೃತ್ಯ ಪ್ರದರ್ಶನ ನಡೆಯಿತು.

ಹೋಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿನಾರಾಯಣಪ್ಪ, ಸದಸ್ಯರಾದ ರಾಮಕೃಷ್ಣಪ್ಪ, ಮುಖ್ಯೋಪಾಧ್ಯಾಯರಾದ ಶರಣಪ್ಪ ಜಮಾಧಾರ್, ನಾರಾಯಣಸ್ವಾಮಿ, ಹಾಲು ಉತ್ಪಾದಕರ ಸಂಘದ ನಿರ್ದೇಶಕ ರಾಮಪ್ಪ, ಎಸ್‌ಎಫ್‌ಸಿಎಸ್ ನಿರ್ದೇಶಕ ನಾರಾಯಣಸ್ವಾಮಿ, ಕವಿ ಜನಪ್ರಿಯ ಕರಗದಮ್ಮ ಕಲಾ ಸಂಸ್ಥೆ ಸದಸ್ಯ ನಾರಾಯಣಸ್ವಾಮಿ, ಸ್ವಾಮಿ ವಿವೇಕಾನಂದ ಸಮುದಾಯ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಎಚ್.ಎಸ್.ರೆಡ್ಡಿ, ನವದೃಷ್ಠಿ ಡೆವಲಪ್‌ಮೆಂಟ್ ಟ್ರಸ್ಟ್ ಅಧ್ಯಕ್ಷ ಮಂಜುನಾಥ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT