ಶನಿವಾರ, ಜನವರಿ 22, 2022
16 °C

ಕೋಲಾರ | ಮನೆ ಕುಸಿತ: ದಂಪತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ತಾಲ್ಲೂಕಿನ ಕೆ. ಮಲ್ಲಂಡಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಹಳೆಯ ಮನೆ ಕುಸಿದು ವಯೋವೃದ್ಧ ದಂಪತಿ ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ.

ಗ್ರಾಮದ ನಾಗರಾಜಪ್ಪ (65) ಮತ್ತು ಅವರ ಪತ್ನಿ ಲಕ್ಷ್ಮಮ್ಮ (60) ಮೃತಪಟ್ಟವರು. ಅವರ ಸಂಬಂಧಿ ಸೀನಪ್ಪ ಅವರನ್ನು ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕೂಲಿ ಕಾರ್ಮಿಕರಾದ ನಾಗರಾಜಪ್ಪ ದಂಪತಿ ಹಳೆಯ ಮನೆಯಲ್ಲಿ ವಾಸವಾಗಿದ್ದರು. ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ಶಿಥಿಲಗೊಂಡಿದ್ದ ಆ ಮನೆಯು ರಾತ್ರಿ ಏಕಾಏಕಿ ಕುಸಿದಿದೆ. ಗ್ರಾಮಸ್ಥರ ನೆರವಿನಿಂದ ಸೀನಪ್ಪ ಅವರನ್ನು ರಕ್ಷಿಸಲಾಯಿತು. ಅಂಗವಿಕಲರಾದ ಅವರಿಗೆ ತೀವ್ರವಾಗಿ ಗಾಯಗೊಂಡಿದ್ದಾರೆ.

ವೇಮಗಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು