ಕೋಲಾರ: ಕೆಲಸಕ್ಕೆ ನಿಯೋಜನೆ ಮಾಡಿಕೊಡುವ ಸಲುವಾಗಿ ಕಚೇರಿಯಲ್ಲಿ ಶನಿವಾರ ₹ 6 ಸಾವಿರ ಲಂಚ ಪಡೆಯುವ ವೇಳೆ ಕೋಲಾರದ ಗೃಹರಕ್ಷಕ ದಳದ ಡೆಪ್ಯುಟಿ ಕಮಾಂಡೆಂಟ್ ಆರ್.ರಾಜೇಂದ್ರನ್ ಎಂಬುವರು ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾರೆ.

ಗೃಹ ರಕ್ಷಕ ದಳದ ಸುಬ್ಬಾನಾಯಕ್ ಎಂಬುವರನ್ನು ಬೆಂಗಳೂರಿನ ಹಲಸೂರು ಮೆಟ್ರೊ ನಿಲ್ದಾಣದಲ್ಲಿ ಕೆಲಸಕ್ಕೆ ನಿಯೋಜನೆ ಮಾಡಿಕೊಡುವ ಸಲುವಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಲಂಚ ಪಡೆಯುವ ವೇಳೆ ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದ ತಂಡ ಬೀಸಿದ ಬಲೆಗೆ ಅವರು ಬಿದ್ದಿದ್ದಾರೆ. ಆರೋಪಿಯನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.