ಹೊಸಕೋಟೆ: ನಗರದ ದಿನದಿಂದ ದಿನಕ್ಕೆ ಕಸದ ಸಮಸ್ಯೆ ಬಿಗಡಾಯಿಸುತ್ತಿರುವ ಕಾರಣ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ನಗರದ ವಿವಿಧೆಡೆ ಮಂಗಳವಾರ ಸ್ವಚ್ಛತಾ ಅಭಿಯಾನದ ಅಂಗವಾಗಿ ಬೈಕ್ ರ್ಯಾಲಿ ನಡೆಯಿತು.

ನಗರಸಭೆ ಕಾರ್ಯಾಲಯದಿಂದ ಹೂಮಂಡಿ ಸರ್ಕಲ್, ಕೆಇಬಿ ಸರ್ಕಲ್ ಮೂಲಕ ಕಾಲೇಜು ರಸ್ತೆ, ಗಂಗಮ್ಮ ಗುಡಿ ರಸ್ತೆ, ಸ್ವಾಮಿ ವಿವೇಕಾನಂದ ಶಾಲೆ ರಸ್ತೆ ಪುನಃ ಕೆಇಬಿ ಸರ್ಕಲ್ ಮೂಲಕ ಹಳೆ ಮಾರುಕಟ್ಟೆಯ ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಸಲಾಯಿತು. ನಿಷೇಧಿತ ಪ್ಲಾಸ್ಟಿಕ್ ಬಳಕೆ ಕಾನೂನು ರೀತಿ ಅಪರಾಧ. ಬಳಸಿದ್ದು ಕಂಡುಬಂದಲ್ಲಿ ಅಂತಹವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಅರಿವು ಮೂಡಿಸಲಾಯಿತು.

ನಗರಸಭೆ ಆಯುಕ್ತ ನೀಲಲೋಚನ ಪ್ರಭು ಮಾತನಾಡಿ, ನಗರದಲ್ಲಿ ಕಸ ಮುಕ್ತ ಮಾಡಲು ಏನೇ ಕ್ರಮ ಕೈಗೊಂಡರೂ ಅದಕ್ಕೆ ಸಾರ್ವಜನಿಕರ ಸಹಕಾರ ಇಲ್ಲದೆ ಅದು ಯಶಸ್ವಿಯಾಗದು. ಆದ್ದರಿಂದ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಬೈಕ್ ರ್ಯಾಲಿ ನಡೆಸಲಾಗಿದೆ. ನಗರವನ್ನು ಕಸಮುಕ್ತಗೊಳಿಸಲು ಈ ಹಿಂದೆಯೇ ಹಾಟ್ಸ್ಪಾಟ್ ಗುರುತಿಸುವ, ನೈಟ್ ಬಿಟ್ ಆರಂಭಿಸಿ ನಗರದ ಬೀದಿ ಬೀದಿಯನ್ನು ಸುತ್ತಿ ಅರಿವು ಮೂಡಿಸುವ ಕೆಲಸ ಮಾಡಲಾಗಿತ್ತು. ಆದರೂ ಕಸದ ಸಮಸ್ಯೆ ಬಗೆಹರಿದಿಲ್ಲ ಎಂದು ಹೇಳಿದರು.

ನಗರದಲ್ಲಿ ಪ್ಲಾಸ್ಟಿಕ್ ಬಳಕೆ ಅವ್ಯಾಹತವಾಗಿರುವ ಕಾರಣ ಕಸ ಎಲ್ಲಿ ನೋಡಿದರೂ ಕಂಡುಬರುತ್ತಿದೆ. ನಿಷೇಧಿತ ಪ್ಲಾಸ್ಟಿಕ್ ಬಳಸುತ್ತಿರುವುದು ಕಂಡುಬಂದಲ್ಲಿ ಕಾನೂನು ರೀತಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಅಧಿಕಾರಿ ಆಶಾ ಹೇಳಿದರು.

ನಗರಸಭೆ ಎಇಇ ರವೀಂದ್ರ, ಆರ್ಒ ತ್ಯಾಗರಾಜ್, ಆರೋಗ್ಯ ಅಧಿಕಾರಿ ಆಂಜಿನಪ್ಪ, ಸತೀಶ್, ಸಿಬ್ಬಂದಿ ಮತ್ತು ಪೌರಕಾರ್ಮಿಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-15-496284237

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.