ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಳಬಾಗಿಲು | ಆಸ್ಪತ್ರೆ ಅವ್ಯವಸ್ಥೆ: ರೈತ ಸಂಘ ಧರಣಿ

Last Updated 24 ಫೆಬ್ರುವರಿ 2023, 3:58 IST
ಅಕ್ಷರ ಗಾತ್ರ

ಮುಳಬಾಗಿಲು: ನಗರದ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸುವಂತೆ ರೈತ ಸಂಘದಿಂದ ಆಸ್ಪತ್ರೆ ಮುಂಭಾಗ ಗುರುವಾರ ಅಹೋರಾತ್ರಿ ಧರಣಿ ನಡೆಯಿತು.

ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಬಂಗಾರಿ ಮಂಜು ಮಾತನಾಡಿ, ಆಸ್ಪತ್ರೆಯಲ್ಲಿ ಐಸಿಯು ಘಟಕದ ಕಾಮಗಾರಿ ಅಪೂರ್ಣಗೊಂಡಿದೆ. ಆಮ್ಲಜನಕ ಉತ್ಪಾದನಾ ಘಟಕ ದುರಸ್ತಿ ಕಂಡಿಲ್ಲ. ಸ್ಕ್ಯಾನಿಂಗ್ ಯಂತ್ರವೂ ಕೆಟ್ಟುನಿಂತಿದೆ ಎಂದು ದೂರಿದರು.

ಮೂರು ವರ್ಷದಿಂದಲೂ ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಪ್ರತಿ ತಿಂಗಳು ಸಾವಿರಾರು ರೂಪಾಯಿ ನೀಡಿ ಕುಡಿಯುವ ನೀರನ್ನು ಖರೀದಿಸಬೇಕಾದ ಪರಿಸ್ಥಿತಿ ತಲೆದೋರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ಔಷಧಿ, ಮಾತ್ರೆಗಳನ್ನು ಕವರ್‌ಗಳಲ್ಲಿ ಇಟ್ಟು ನೀಡದೆ ನೇರವಾಗಿ ನೀಡಲಾಗುತ್ತಿದೆ. ಚರ್ಮ ಕಾಯಿಲೆಗೆ ಔಷಧಿ ನೀಡುತ್ತಿಲ್ಲ. ಆಸ್ಪತ್ರೆಯಲ್ಲಿ ಸ್ವಚ್ಛತೆ ಇಲ್ಲ, ನಗು ಮಗು ಆಂಬುಲೆನ್ಸ್ ಎಲ್ಲೆಂದರಲ್ಲಿ ನಿಲ್ಲುವ ಸ್ಥಿತಿಯಲ್ಲಿದೆ. ಸೂಕ್ತ ಪಾರ್ಕಿಂಗ್ ವ್ಯವಸ್ಥೆಯೂ ಇಲ್ಲ ಎಂದು ದೂರಿದರು.

ಧರಣಿ ಸ್ಥಳಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್ ಆಗಮಿಸಿ ಒಂದು ವಾರದೊಳಗೆ ಸಮಸ್ಯೆ ಬಗೆಹರಿಸುತ್ತೇವೆ. ಇಲ್ಲವಾದರೆ ಅಹೋರಾತ್ರಿ ಧರಣಿ ಮುಂದುವರಿಸಿ ಎಂದು ಭರವಸೆ ನೀಡಿದ ಬಳಿಕ ಹೋರಾಟ ಕೈಬಿಡಲಾಯಿತು.

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಯಲುವಳ್ಳಿ ಪ್ರಭಾಕರ್, ಹೆಬ್ಬಣಿ ಆನಂದರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT