ಯುಗಾದಿಗೆ ಎಪಿಎಂಸಿ ಲೋಕಾರ್ಪಣೆ
ಯುಗಾದಿ ಸಮಯಕ್ಕೆ ಎಪಿಎಂಸಿ ಮಾರುಕಟ್ಟೆ ಕಾರ್ಯಾಚರಣೆ ಶುರು ಮಾಡುವ ಸಂಭವ ಇದೆ. ಮೊದಲ ಹಂತದಲ್ಲಿ ₹10 ಕೋಟಿ ಅನುದಾನ ಬಿಡುಗಡೆಯಾಗಿದೆ. ರಸ್ತೆ ಮತ್ತಿತರ ಮೂಲಭೂತ ಸೌಕರ್ಯಗಳ ಕಾಮಗಾರಿ ಶುರುವಾಗಲಿದೆ. ಟ್ರಕ್ ಟೆಂಪೊ ನಿಲುಗಡೆ ಸ್ಥಳ ನಿರ್ಮಾಣವಾಗಲಿದೆ. ಮುಂದಿನ ದಿನಗಳಲ್ಲಿ ಸುಮಾರು ನೂರು ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗುವುದು. ರೈತರಿಗೆ ಎಲ್ಲಾ ರೀತಿಯ ಸೌಲಭ್ಯ ಒದಗಿಸುವ ರೈತರ ಮಾರುಕಟ್ಟೆಯನ್ನು ನಿರ್ಮಾಣ ಮಾಡಲಾಗುವುದು. ಮಾರುಕಟ್ಟೆ ನಿರ್ಮಾಣದಲ್ಲಿ ಸಾಕಷ್ಟು ವಿಘ್ನಗಳು ಬಂದವು. ನಾನೂ ಸಾಕಷ್ಟು ನೋವನ್ನು ಅನುಭವಿಸಿದ್ದೇನೆ. ಕೊನೆಗೆ ಎಲ್ಲಾ ರೀತಿಯಲ್ಲಿ ಅನುಕೂಲವಾಗಿ ಯುಗಾದಿಗೆ ಲೋಕಾರ್ಪಣೆಯಾಗುವ ಸಂಭವ ಇದೆ ಎಂದು ಶಾಸಕಿ ಎಂ.ರೂಪಕಲಾ ತಿಳಿಸಿದರು. ಆಂಧ್ರದವರು ರಾಜ್ಯದ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ಗಂಭೀರವಾಗಿ ಕೇಳಿ ಬರುತ್ತಿದೆ. ಮುಲಾಜಿಲ್ಲದೆ ಅವರನ್ನು ತೆರವುಗೊಳಿಸಲು ಕಂದಾಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.