ಬುಧವಾರ, ಆಗಸ್ಟ್ 17, 2022
23 °C

ಚುನಾವಣೆಯಲ್ಲಿ ರಾಜಕೀಯ ಶಕ್ತಿ ತೋರಿಸುತ್ತೇನೆ: ವರ್ತೂರು ಪ್ರಕಾಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ನಾನು ಚುನಾವಣೆಯಲ್ಲಿ ಸೋತಿದ್ದರೂ ರಾಜಕೀಯವಾಗಿ ಶಕ್ತಿ ಕುಂದಿಲ್ಲ. ಬೆಂಬಲಿಗರು ಹಾಗೂ ಕಾರ್ಯಕರ್ತರು ಜತೆಗಿದ್ದು, ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ನನ್ನ ಶಕ್ತಿ ತೋರಿಸುತ್ತೇನೆ’ ಎಂದು ಮಾಜಿ ಶಾಸಕ ವರ್ತೂರು ಪ್ರಕಾಶ್‌ ಹೇಳಿದರು.

ಜಿ.ಪಂ ಹಾಗೂ ತಾ.ಪಂ ಕ್ಷೇತ್ರಗಳ ಕರಡು ಮೀಸಲಾತಿ ಪಟ್ಟಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಇಲ್ಲಿ ಮಂಗಳವಾರ ಬೆಂಬಲಿಗರ ಜತೆ ಸಭೆ ನಡೆಸಿದ ಅವರು, ‘ನಮಗೆ ಯಾವುದೇ ಪಕ್ಷದ ಬೆಂಬಲ ಇಲ್ಲದಿದ್ದರೂ ಗೆಲ್ಲುವ ಶಕ್ತಿಯಿದೆ. ಈಗಾಗಲೇ ಗ್ರಾ.ಪಂ ಚುನಾವಣೆಯಲ್ಲಿ ನಮ್ಮ ಶಕ್ತಿ ತೋರಿಸಿದ್ದೇವೆ. ಜಿ.ಪಂ ಹಾಗೂ ತಾ.ಪಂ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಅಧಿಕಾರ ಹಿಡಿಯಬೇಕು’ ಎಂದರು.

‘ಜಿ.ಪಂ ಹಾಗೂ ತಾ.ಪಂ ಚುನಾವಣಾ ಫಲಿತಾಂಶವು ವಿಧಾನಸಭಾ ಚುನಾವಣೆಗೆ ದಿಕ್ಸೂಚಿ. ಹೀಗಾಗಿ ಜಿ.ಪಂ ಮತ್ತು ತಾ.ಪಂ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ನಮ್ಮ ಬೆಂಬಲಿಗರು ಗೆದ್ದರೆ ವಿಧಾನಸಭಾ ಚುನಾವಣೆ ಗೆಲ್ಲಲು ಅನುಕೂಲವಾಗುತ್ತದೆ. ಕಾರ್ಯಕರ್ತರು ಅತಿ ವಿಶ್ವಾಸದಿಂದ ಮೈಮರೆಯದೆ ಕೆಲಸ ಮಾಡಿದರೆ ಜಿಲ್ಲೆಯಲ್ಲಿ 10ಕ್ಕೂ ಜಿ.ಪಂ ಸ್ಥಾನಗಳನ್ನು ಗೆಲ್ಲಬಹುದು’ ಎಂದು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 4 ಜಿ.ಪಂ ಹಾಗೂ 10 ತಾ.ಪಂ ಕ್ಷೇತ್ರಗಳಿಗೆ ಸ್ಪರ್ಧಿಸಲು ಇಚ್ಛೆಯಿರುವವರ ಹಾಗೂ ಬೆಂಬಲಿಗರ ಅಭಿಪ್ರಾಯ ಸಂಗ್ರಹಿಸಲಾಯಿತು. ಮುಖಂಡರಾದ ಬೆಗ್ಲಿ ಸೂರ್ಯಪ್ರಕಾಶ್, ಜಿ.ಪಂ ಮಾಜಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ಮಾಜಿ ಸದಸ್ಯ ಅರುಣ್‌ಪ್ರಸಾದ್, ತಾ.ಪಂ ಮಾಜಿ ಅಧ್ಯಕ್ಷ ಆಂಜಿನಪ್ಪ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು