ಮಾಲೂರು: ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈಗಾಗಲೇ ಹೇಳಿರುವಂತೆ ಮುಂದಿನ ವಾರ ದೆಹಲಿಗೆ ಹೋಗಲಿದ್ದಾರೆ. ಅಲ್ಲಿಂದ ವಾಪಸ್ ಬಂದ ನಂತರ ಸಂಪುಟ ಪುನರ್ ರಚನೆಯಾಗಲಿದೆ. ನಾನು ಮಂತ್ರಿಯಾಗುವುದು ಶತಸಿದ್ಧ’ ಎಂದು ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಹೇಳಿದರು.
ತಾಲ್ಲೂಕಿನ ಚಿಕ್ಕತಿರುಪತಿಯಲ್ಲಿ ಶುಕ್ರವಾರ ನೂತನವಾಗಿ ಆರಂಭವಾದ ಮದರ್ ತೆರೆಸಾ ಆಸ್ಪತ್ರೆ ಉದ್ಘಾಟಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
‘ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಮುಖ್ಯಮಂತ್ರಿ ಭೇಟಿಮಾಡಿ ಮಾತುಕತೆ ನಡೆಸಲಿದ್ದಾರೆ. ಒಪ್ಪಿಗೆ ಸಿಕ್ಕ ತಕ್ಷಣ ಸಂಪುಟ ಪುನರ್ ರಚನೆಯಾಗಲಿದೆ. ನನಗೆ ಸಚಿವ ಸ್ಥಾನ ಸಿಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.