ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಜಮೀನು ಅಕ್ರಮ ಪರಭಾರೆ

Last Updated 21 ಮಾರ್ಚ್ 2023, 5:53 IST
ಅಕ್ಷರ ಗಾತ್ರ

ಮಾಲೂರು: ‘ತಾಲ್ಲೂಕು ಆಡಳಿತ ಹದಗೆಟ್ಟಿದ್ದು, ರೈತರ ಜಮೀನಿನ ದಾಖಲೆಗಳು ಅನ್ಯರಿಗೆ ಪರಭಾರೆಯಾಗಿರುವ ಸಂದೇಹ ಹೆಚ್ಚಾಗಿದೆ’ ಎಂದು ಜೆಡಿಎಸ್ ಅಭ್ಯರ್ಥಿ ಜಿ.ಇ. ರಾಮೇಗೌಡ ಆತಂಕ ವ್ಯಕ್ತಪಡಿಸಿದರು.

ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಸೋಮವಾರ ತಾಲ್ಲೂಕು ಜೆಡಿಎಸ್ ಘಟಕದಿಂದ ಹಮ್ಮಿಕೊಂಡಿದ್ದ ಪಕ್ಷದ ಪದಾಧಿಕಾರಿಗಳ ನೇಮಕಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಲ್ಲೂಕು ಕಚೇರಿಯಲ್ಲಿ ರೈತರು ಸೇರಿದಂತೆ ನಾಗರಿಕರ ಜಮೀನಿನ ದಾಖಲಾತಿಗಳನ್ನು ಮಧ್ಯವರ್ತಿಗಳು ಅಧಿಕಾರಿಗಳ ಜೊತೆ ಸೇರಿ ಮಾಯ ಮಾಡುತ್ತಿದ್ದಾರೆ. ರೈತರು ತಮ್ಮ ಜಮೀನಿನ ದಾಖಲಾತಿಗಳು ಸಿಗದೆ ಪ್ರತಿದಿನ ಕಚೇರಿ ಸುತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ತಾಲ್ಲೂಕು ಆಡಳಿತದಲ್ಲಿ ಕಾಸು ಇಲ್ಲದೇ ಯಾವುದೇ ಕಡತ ಮುಂದೆ ಸಾಗುವುದಿಲ್ಲ. ಇನ್ನು ತಾಲ್ಲೂಕಿನ ಜನತೆಯ ಆರೋಗ್ಯದ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಕಾಳಜಿ ವಹಿಸುತ್ತಿಲ್ಲ ಎಂದು ದೂರಿದರು.

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಯಂತ್ರಗಳ ಕೊರತೆಯಿಂದ ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಬೆಂಗಳೂರಿಗೆ ತೆರಳಿ ಚಿಕಿತ್ಸೆ ಪಡೆಯುತಿದ್ದಾರೆ. ಬಡ ರೋಗಿಗಳು ಹಣದ ಕೊರತೆಯಿಂದ ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT