ಅಕ್ರಮ ಗಣಿ; ಮೇಲ್ನೋಟಕ್ಕೆ ಸಾಬೀತು
‘ಅಕ್ರಮ ಗಣಿಗಾರಿಕೆ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಈಗಾಗಲೇ ನೋಟಿಸ್ ನೀಡಲಾಗಿದೆ. ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಕ್ರಮಕ್ಕೆ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ’ ಎಂದು ಸಚಿವ ಶರಣ ಪ್ರಕಾಶ ಪಾಟೀಲ ಉತ್ತರಿಸಿದರು. ಅರಣ್ಯ ಸಚಿವ ಈಶ್ವರ ಖಂಡ್ರೆ ಗೈರಿನಲ್ಲಿ ಅವರ ಪರವಾಗಿ ಮಾತನಾಡಿ ಮುಂದೆ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.