ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಕಲ್ಲು ಗಣಿಗಾರಿಕೆ: ಭೂ ವಿಜ್ಞಾನ ಇಲಾಖೆ ಅಧಿಕಾರಿ ಸೇರಿ ಹಲವರಿಗೆ ನೋಟಿಸ್‌

Last Updated 24 ಸೆಪ್ಟೆಂಬರ್ 2020, 14:19 IST
ಅಕ್ಷರ ಗಾತ್ರ

ಮಾಲೂರು: ಅಕ್ರಮ ಕಲ್ಲು ಗಣಿಗಾರಿಕೆಯ ಬಗ್ಗೆ ಕ್ರಮ ಕೈಗೊಳ್ಳದ ಕಾರಣ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ, ತಹಶೀಲ್ದಾರ್‌ ಸೇರಿ ಕಂದಾಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸತ್ಯಭಾಮ ‌ನೋಟಿಸ್ ನೀಡಿದ್ದಾರೆ.

ಸಾರ್ವಜನಿಕರ ದೂರಿನ ಮೇರೆಗೆ ಈಚೆಗೆ ರಾತ್ರಿ ವೇಳೆ ತಾಲ್ಲೂಕಿನ ನಿದರ ಮಂಗಲ ಕಂದಾಯ ವೃತ್ತದ ಸುದ್ದುಗುಂಟೆ ಬೇಚರ್ ಗ್ರಾಮದ ಸರ್ವೆ ನಂ–1 ರ ಸರ್ಕಾರಿ ಜಮೀನಿಗೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಅಕ್ರಮ ಕಲ್ಲು ಗಾಣಿಗಾರಿಕೆ ಪತ್ತೆ ಹಚ್ಚಿದ್ದರು.

ಸ್ಥಳದಲ್ಲಿ ಕಲ್ಲು ಕೆಲಸ ಮಾಡುತ್ತಿದ್ದ ಕ್ರೇನ್ ವಶಪಡಿಸಿಕೊಂಡು ಮಾಲೀಕ ಹಾಗೂ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ವ್ಯಕ್ತಿಗಳ ವಿರುದ್ದ ದೂರು ದಾಖಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದರೂ ಮಾಹಿತಿ ನೀಡದ ಮತ್ತು ಕ್ರಮ ಕೈಗೊಳ್ಳದ ಕಾರಣಕ್ಕೆ ಹಿರಿಯ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಷಣ್ಮುಖ, ತಹಶೀಲ್ದಾರ್‌ ಮಂಜುನಾಥ, ಕಂದಾಯ ಅಧಿಕಾರಿ ಮುನಿಸ್ವಾಮಿ ಶೆಟ್ಟಿ, ಗ್ರಾಮ ಲೆಕ್ಕಿಗ ಗುರುದತ್‌ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT