ಕೋಲಾರ: ತಾಲ್ಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳಿಗೆ ಕೆಐಎಡಿಬಿಯಿಂದ ಕೆ.ಸಿ ವ್ಯಾಲಿ ನೀರು ಹರಿಸಲು ಕಾಮಗಾರಿ ನಡೆಯುತ್ತಿದ್ದು, ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ನಿತ್ಯ ಕಿರಿಕಿರಿ ಅನುಭವಿಸುವಂತಾಗಿದೆ ಎಂದು ಈ ಭಾಗದ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಮಗಾರಿಗಾಗಿ ಅಗೆದಿರುವ ರಸ್ತೆಯನ್ನು ಸಂಪೂರ್ಣವಾಗಿ ಮುಚ್ಚಿ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಜಿಲ್ಲೆಯ ನರಸಾಪುರ ಭಾಗದಲ್ಲಿ ಕೈಗಾರಿಕೆಗಳು ಪ್ರಾರಂಭವಾಗಿ ಜನಸಂದಣಿ ಕೂಡ ಹೆಚ್ಚಾಗಿದೆ. ಸಾವಿರಾರು ಜನ ನಿತ್ಯ ಕೈಗಾರಿಕೆಗಳಿಗೆ ಕೆಲಸಕ್ಕೆ ಹೋಗಿ ಬರುತ್ತಾರೆ. ಇಂತಹ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಕೈಗಾರಿಗಳಿಗೆ ಕೆ.ಸಿ ವ್ಯಾಲಿ ನೀರು ಪೂರೈಸಲು ರಸ್ತೆ ಅಗೆದು ವರ್ಷವಾಗಿದೆ. ಒಂದು ಕಡೆಯ ರಸ್ತೆ ಬಂದ್ ಮಾಡಿ ಮತ್ತೊಂದು ರಸ್ತೆಯಲ್ಲಿ ಮಾತ್ರ ವಾಹನಗಳಿಗೆ ಅವಕಾಶ ನೀಡಿದ್ದಾರೆ. ಇದರಿಂದಾಗಿ ನಿತ್ಯ ಸಂಚಾರ ದಟ್ಟಣೆ ಆಗಿ ಕಾರ್ಮಿಕರು ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಕಾಮಗಾರಿ ನೆಪದಲ್ಲಿ ಜನರಿಗೆ ತೊಂದರೆ ನೀಡುವುದು ಸರಿಯಾದ ಕ್ರಮವಲ್ಲ, ಕೂಡಲೇ ಅಗೆದಿರುವ ರಸ್ತೆಗಳನ್ನು ಪೂರ್ಣ ಪ್ರಮಾಣದಲ್ಲಿ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಜೆಡಿಎಸ್ ಮುಖಂಡ ಖಾಜಿಕಲ್ಲಹಳ್ಳಿ ಹರೀಶ್ ಆಗ್ರಹಿಸಿದ್ದಾರೆ.

ನರಸಾಪುರ ಕೈಗಾರಿಕಾ ಪ್ರದೇಶದ ಬಳಿಯ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದೆ. ಹೀಗಾಗಿ, ಬೆಂಗಳೂರಿಗೆ ಹೋಗಿ ಬರಲು ಸರ್ವಿಸ್ ರಸ್ತೆ ಬಳಸಬೇಕಾಗಿದೆ. ಭಾನುವಾರ ಸಂಜೆ ಕನಿಷ್ಠ 3 ಕಿ.ಮೀ ದೂರದಷ್ಟು ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ತೊಂದರೆ ಆಗುತ್ತಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಕಾಮಗಾರಿಯನ್ನು ಬೇಗನೇ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.