ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗದಾತರ ಪಾಲ್ಗೊಳ್ಳುವಿಕೆ ಹೆಚ್ಚಿಸಿ

Last Updated 3 ಫೆಬ್ರುವರಿ 2020, 13:42 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲೆಯಲ್ಲಿ ಫೆ.11 ಮತ್ತು 12ರಂದು ನಡೆಯುವ ಬೃಹತ್ ಉದ್ಯೋಗ ಮೇಳದಲ್ಲಿ ಉದ್ಯೋಗದಾತರು ಹೆಚ್ಚು ಪಾಲ್ಗೊಳ್ಳುವಿಕೆ ಹೆಚ್ಚಿಸಲು ಅಧಿಕಾರಿಗಳು ಪ್ರಚಾರ ನಡೆಸಬೇಕು’ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಸಿದ್ದಲಿಂಗಪ್ಪ ಪೂಜಾರ್ ತಿಳಿಸಿದರು.

ನಗರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸಭಾಂಗಣದಲ್ಲಿ ಉದ್ಯೋಗ ಮೇಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿ, ‘ಮೇಳವು ಸಿಬಿಐಟಿ ಕಾಲೇಜಿನಲ್ಲಿ ನಡೆಸಲು ಸಿದ್ದತೆ ಕೈಗೊಳ್ಳಲಾಗಿದೆ. ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡಬೇಕು ಎಂಬ ಉದ್ದೇಶದಿಂದ ಮೇಳೆ ನಡೆಸಲಾಗುತ್ತಿದ್ದು, ಇದರ ಯಶಸ್ಸಿಗೆ ಪ್ರತಿಯೊಬ್ಬರು ಸಹಕರಿಸಬೇಕು’ ಎಂದು ಕೋರಿದರು.

‘ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಆಸಕ್ತರು ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ. ಮಾಲೂರು, ವೇಮಗಲ್, ನರಸಾಪುರ ಸೇರಿದಂತೆ ಬೆಂಗಳೂರಿನಿಂದಲೂ ಪ್ರತಿಷ್ಠಿತ ಕಂಪನಿಗಳವರು ಮೇಳದಲ್ಲಿ ಪಾಲ್ಗೊಳ್ಳುವಂತೆ ಮನವೊಲಿಸಬೇಕು’ ಎಂದು ಹೇಳಿದರು.

‘ಮೇಳದಲ್ಲಿ ಇಲಾಖಾಧಿಕಾರಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ನಿರ್ವಹಿಸಬೇಕು. ಮೇಳ ಸಿದ್ದತೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪ್ರತಿದಿನ ವರದಿ ನೀಡಬೇಕು. ಅಧಿಕಾರಿಗಳು ಸಹರಿಸಬೇಕು’ ಎಂದು ಕೋರಿದರು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಉಪ ನಿರ್ದೇಶಕ ಎನ್.ರವಿಚಂದ್ರ, ಸಹಾಯಕ ನಿರ್ದೇಶಕರಾದ ವೆಂಕಟರಮಣ, ರಫೀಕ್, ಪರಿಸರ ಅಽಕಾರಿ ಮಂಜುನಾಥ್, ಉದ್ಯೋಗ ವಿನಿಮಯಾಧಿಕಾರಿ ಶ್ರೀನಿವಾಸ್, ಕೌಶಲ್ಯಾಭಿವೃದ್ಧಿ ಅಽಧಿಕಾರಿ ಶ್ರೀನಿವಾಸ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT