ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 23 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 8 ಮಂದಿ, ಮಾಲೂರು ಹಾಗೂ ಬಂಗಾರಪೇಟೆ ತಾಲ್ಲೂಕಿನ ತಲಾ ಒಬ್ಬರು, ಕೆಜಿಎಫ್ ತಾಲ್ಲೂಕಿನ 3 ಮಂದಿ, ಮುಳಬಾಗಿಲು ತಾಲ್ಲೂಕಿನ ಇಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.