ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆ

Last Updated 4 ಮಾರ್ಚ್ 2022, 14:10 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 4 ಮಂದಿಗೆ ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.

ಕೋಲಾರ ತಾಲ್ಲೂಕಿನ ಇಬ್ಬರಿಗೆ, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ಹರಡಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಮನೆಗಳಲ್ಲೇ ಕ್ವಾರಂಟೈನ್‌ ಆಗಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೋಲಾರ ಮತ್ತು ಬಂಗಾರಪೇಟೆ ತಾಲ್ಲೂಕಿನ ತಲಾ ಒಬ್ಬರುಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT