ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 6 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಗುರುವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಕೋಲಾರ ತಾಲ್ಲೂಕಿನ 3 ಮಂದಿಗೆ, ಮಾಲೂರು ತಾಲ್ಲೂಕಿನ ಒಬ್ಬರಿಗೆ ಹಾಗೂ ಕೆಜಿಎಫ್ ತಾಲ್ಲೂಕಿನ ಇಬ್ಬರಿಗೆ ಸೋಂಕು ಹರಡಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 4 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರು, ಕೆಜಿಎಫ್ ತಾಲ್ಲೂಕಿನ ಇಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.