ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆ

Last Updated 18 ಅಕ್ಟೋಬರ್ 2021, 14:42 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 5 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

ಕೋಲಾರ ತಾಲ್ಲೂಕಿನ 3 ಮಂದಿಗೆ, ಕೆಜಿಎಫ್‌ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 3 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ ಇಬ್ಬರು ಮತ್ತು ಮಾಲೂರು ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT