ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಸೋಂಕಿತರ ಸಂಖ್ಯೆ 697ಕ್ಕೆ ಏರಿಕೆ

Last Updated 3 ನವೆಂಬರ್ 2020, 14:29 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 82 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಮಂಗಳವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 697ಕ್ಕೆ ಏರಿಕೆಯಾಗಿದೆ.

ಮಾಲೂರು ತಾಲ್ಲೂಕಿನಲ್ಲಿ ಅತಿ ಹೆಚ್ಚು 27 ಮಂದಿಗೆ ಸೋಂಕು ಹರಡಿದೆ. ಕೋಲಾರ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 16, ಬಂಗಾರಪೇಟೆ ತಾಲ್ಲೂಕಿನ 17, ಕೆಜಿಎಫ್‌ ತಾಲ್ಲೂಕಿನ 5 ಮತ್ತು ಶ್ರೀನಿವಾಸಪುರ ತಾಲ್ಲೂಕಿನ ಒಬ್ಬರಿಗೆ ಸೋಂಕು ಬಂದಿದೆ.

ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 108 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 29 ಮಂದಿ, ಮಾಲೂರು ತಾಲ್ಲೂಕಿನ 23, ಕೆಜಿಎಫ್‌ ಮತ್ತು ಬಂಗಾರಪೇಟೆ ತಾಲ್ಲೂಕಿನ ತಲಾ 15, ಮುಳಬಾಗಿಲು ತಾಲ್ಲೂಕಿನ 10 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 16 ಮಂದಿಯನ್ನು ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT