ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಸಂಖ್ಯೆ 99ಕ್ಕೆ ಏರಿಕೆ

Last Updated 18 ಡಿಸೆಂಬರ್ 2020, 14:06 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 18 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಶುಕ್ರವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 99ಕ್ಕೆ ಏರಿಕೆಯಾಗಿದೆ.

ಕೋಲಾರ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 3 ಮಂದಿಗೆ, ಮಾಲೂರು ತಾಲ್ಲೂಕಿನ 7, ಕೆಜಿಎಫ್‌ ತಾಲ್ಲೂಕಿನ 4 ಮಂದಿಗೆ ಹಾಗೂ ಮುಳಬಾಗಿಲು ತಾಲ್ಲೂಕಿನ ಒಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 10 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 4, ಬಂಗಾರಪೇಟೆ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಇಬ್ಬರು, ಕೆಜಿಎಫ್‌ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರನ್ನು ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT