ಮಾಲೂರು: ಪಟ್ಟಣದ ಮಾರಿಕಾಂಬ ವೃತ್ತದ ಬಳಿಯ ತಾಲ್ಲೂಕು ಪಂಚಾಯಿತಿ ನಿವೇಶನದಲ್ಲಿ ಮುಕ್ತಾಯದ ಹಂತದಲ್ಲಿರುವ ಇಂದಿರಾ ಗಾಂಧಿ ಕ್ಯಾಂಟೀನ್ ಕಟ್ಟಡದ ಬಳಿ ಕೊಳವೆಬಾವಿ ಕೊರೆಯುವ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿದರು.
ಶಾಸಕ ಕೆ.ವೈ. ನಂಜೇಗೌಡ ಮಾತನಾಡಿ, ‘ಹಳ್ಳಿಯಿಂದ ಪಟ್ಟಣಕ್ಕೆ ಬರುವ ರೈತರು ಮತ್ತು ಬಡವರಿಗೆ ಅನುಕೂಲವಾಗುವಂತೆ ಇಂದಿರಾ ಕ್ಯಾಂಟಿನ್ ಅನ್ನು ಒಂದು ತಿಂಗಳ ಒಳಗೆ ಆರಂಭಿಸಲಾಗುವುದು’ ಎಂದು ತಿಳಿಸಿದರು.
ಇಂದಿರಾ ಕ್ಯಾಂಟಿನ್ ಸ್ತಾಪನೆಗೆ ಈ ಹಿಂದಿನ ಬಿಜೆಪಿ ಸರ್ಕಾರ ನಮಗೆ ಅವಕಾಶ ನೀಡಿರಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಇಂದಿರಾ ಕ್ಯಾಂಟಿನ್ ಕಟ್ಟಡ ಕಾಮಗಾರಿ ಆರಂಭಿಸಲಾಗಿದೆ. ಪಟ್ಟಣದ ಹೃದಯ ಭಾಗದಲ್ಲಿ ಇಂದಿರಾ ಕ್ಯಾಂಟಿನ್ ಆರಂಭದಿಂದ ಗ್ರಾಮೀಣ ಭಾಗದಿಂದ ಪಟ್ಟಣಕ್ಕೆ ಬರುವ ರೈತರು ಹಾಗೂ ಸ್ಥಳೀಯ ಕಾರ್ಮಿಕರು, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.