ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿಷನ್ ಇಂದ್ರಧನುಷ್ 5.0 ಅಭಿಯಾನಕ್ಕೆ ಚಾಲನೆ

Published 5 ಆಗಸ್ಟ್ 2023, 14:12 IST
Last Updated 5 ಆಗಸ್ಟ್ 2023, 14:12 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ಪೋಷಕರು ಮಕ್ಕಳ ವಯಸ್ಸಿಗೆ ಅನುಗುಣವಾಗಿ ಎಲ್ಲ ಲಸಿಕೆಗಳನ್ನು ತಪ್ಪದೆ ಹಾಕಿಸಿ, ಅವರನ್ನು ಸಂಭವನೀಯ ರೋಗಗಳಿಂದ ಮುಕ್ತಗೊಳಿಸಬೇಕು ಎಂದು ತಹಶೀಲ್ದಾರ್ ಶರಿನ್ ತಾಜ್ ಹೇಳಿದರು.

ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಮಿಷನ್ ಇಂದ್ರಧನುಷ್ 5.0 ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಎಲ್ಲ ಸರ್ಕಾರಿ ಆರೋಗ್ಯ ಕೇಂದ್ರ, ಉಪ ಕೇಂದ್ರ ಹಾಗೂ ಅಂಗನವಾಡಿಗಳಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದರು. 

ಆ.7 ರಿಂದ 12 ರವರೆಗೆ ಐದು ವರ್ಷದೊಳಗಿನ ಮಕ್ಕಳು ಹಾಗೂ ಗರ್ಭಿಣಿಯರಿಗೆ ಲಸಿಕೆ ನೀಡಲಾಗುವುದು. ಬಸ್ ಹಾಗೂ ರೈಲು ನಿಲ್ದಾಣ, ಹಿಂದುಳಿದ ಬಡಾವಣೆಗಳು, ಕೊಳಚೆ ಪ್ರದೇಶ, ವಲಸೆ ಕಾರ್ಮಿಕರು ವಾಸಿಸುವ ಪ್ರದೇಶದಲ್ಲಿನ ಮಕ್ಕಳು ಹಾಗೂ ಅರ್ಹ ಮಹಿಳೆಯರಿಗೆ ಲಸಿಕೆ ನೀಡಲಾಗುವುದು ಎಂದು ಹೇಳಿದರು.

ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮಾಹಿತಿ ಶಿಕ್ಷಣ ಮತ್ತು ಜನ ಸಂಪರ್ಕ ಕಾರ್ಯಕ್ರಮದ ಮೂಲಕ ಅರಿವು ಮೂಡಿಸಬೇಕು. ಅಭಿಯಾನ ಯಶಸ್ಸಿಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಕೈ ಜೋಡಿಸಬೇಕು. ಮುಖ್ಯವಾಗಿ ಪುರಸಭೆ ವ್ಯಾಪ್ತಿಯಲ್ಲಿ ಅಗತ್ಯ ಪ್ರಚಾರ ಕೈಗೊಳ್ಳಬೇಕು ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಷರೀಫ್ ಮಾತನಾಡಿ, ದಡಾರ ರುಬೆಲ್ಲಾ ನಿರ್ಮೂಲನೆಯತ್ತ ದೊಡ್ಡ ಹೆಜ್ಜೆ ಇಡಲಾಗಿದೆ. ಒಟ್ಟಾರೆ ಮಕ್ಕಳನ್ನು ಬಾಧಿಸುವ 12 ರೋಗ ನಿಯಂತ್ರಣಕ್ಕೆ ಪೂರಕವಾಗಿ ಲಸಿಕೆ ನೀಡಲಾಗುತ್ತಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಜತೆಗೆ ವಿದ್ಯಾವಂತ ಸಮುದಾಯ ಗ್ರಾಮೀಣ ಪ್ರದೇಶದಲ್ಲಿ ಲಸಿಕೆ ಅಭಿಯಾನ ಯಶಸ್ಸಿಗೆ ಶ್ರಮಿಸಬೇಕು ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಮಂಜುನಾಥ್, ಪುರಸಭೆ ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್, ಬಿಎಚ್ಇಒ ಆಂಜಿಲಮ್ಮ, ಬಿಪಿಎಂ ಹರೀಶ್, ಶೃತಿ, ಶರಣಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT