ಭಾನುವಾರ, ಆಗಸ್ಟ್ 14, 2022
23 °C

ಜಿಲ್ಲೆಯಲ್ಲಿ ಕೈಗಾರಿಕಾ ಹಬ್‌: ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಜಿಲ್ಲೆಯಲ್ಲಿ ಕೈಗಾರಿಕಾ ಹಬ್ ನಿರ್ಮಿಸಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಲಾಗುತ್ತದೆ ಹಾಗೂ ಆರ್ಥಿಕಾಭಿವೃದ್ಧಿಗೆ ಉತ್ತೇಜನ ನೀಡಲಾಗುತ್ತದೆ’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಭರವಸೆ ನೀಡಿದರು.

ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಜಿಲ್ಲೆಯು ಹಣ್ಣು ಮತ್ತು ತರಕಾರಿಗೆ ಹೆಸರುವಾಸಿಯಾಗಿದ್ದು, ವಿಶೇಷ ಪ್ಯಾಕೇಜ್ ತರಲು ಯೋಜನೆ ರೂಪಿಸಲಾಗಿದೆ’ ಎಂದು ಹೇಳಿದರು.

‘ಭಾರತೀಯ ಶಿಕ್ಷಣ ವ್ಯವಸ್ಥೆಗೆ ಗುರು-ಶಿಷ್ಯ ಪರಂಪರೆಯು ಭದ್ರ ಅಡಿಪಾಯವಿತ್ತು. ಆಧುನಿಕ ಶಾಲಾ ಶಿಕ್ಷಣದಲ್ಲಿ ಸಾಕಷ್ಟು ಲೋಪಗಳಿವೆ. ಶಿಕ್ಷಣದ ಉದ್ದೇಶ ಕಲಿಸುವುದು ಮಾತ್ರವಲ್ಲ. ಕಾಲಕ್ಕೆ ತಕ್ಕಂತೆ ಸಮಾಜ ಬದಲಾದಂತೆ ಶಿಕ್ಷಣ ವ್ಯವಸ್ಥೆಯೂ ಬದಲಾಗಬೇಕು. ಈ ಬದಲಾಣೆ ಅನಿವಾರ್ಯ. ದೇಶದ ಮೂಲ ಶಿಕ್ಷಣಕ್ಕೆ ಆದ್ಯತೆ ನೀಡಲು ಪ್ರಧಾನಿ ಮೋದಿ ಅವರು ಹೊಸ ಶಿಕ್ಷಣ ಪದ್ಧತಿ ಜಾರಿಗೆ ತರುತ್ತಿದ್ದಾರೆ’ ಎಂದರು.

‘ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ ಚಟದಿಂದ ಯುವಕ ಯುವತಿಯರು ತಪ್ಪು ದಾರಿ ಹಿಡಿಯುತ್ತಿದ್ದಾರೆ. ಈ ದಂಧೆಗೆ ಕಡಿವಾಣ ಹಾಕಿ ಮುಂದಿನ ಪೀಳಿಗೆ ಕಾಪಾಡಬೇಕು. ಮಾದಕ ವಸ್ತುಗಳ ದಂಧೆಯಲ್ಲಿ ಯಾರೇ ತೊಡಗಿದ್ದರೂ ಕಾನೂನಿನ ಪ್ರಕಾರ ಅವರನ್ನು ಶಿಕ್ಷಿಸಲಾಗುತ್ತದೆ. ಈ ವಿಚಾರದಲ್ಲಿ ಪಕ್ಷ ರಾಜಿ ಮಾಡಿಕೊಳ್ಳುವುದಿಲ್ಲ ಹಾಗೂ ಆರೋಪಿಗಳನ್ನು ರಕ್ಷಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಸಂಸದ ಎಸ್‌.ಮುನಿಸ್ವಾಮಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೇಣುಗೋಪಾಲ್, ಜಿಲ್ಲಾ ಪ್ರಭಾರಿ ಗೀತಾ ವಿವೇಕರೆಡ್ಡಿ, ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.