ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರು ದಾಖಲೆ ಪ್ರಮಾಣದಲ್ಲಿ ಗುಣಮುಖ

Last Updated 2 ಆಗಸ್ಟ್ 2020, 15:01 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರು ದಾಖಲೆ ಪ್ರಮಾಣದಲ್ಲಿ ಗುಣಮುಖರಾಗುತ್ತಿದ್ದು, ಜನರಲ್ಲಿ ಆತಂಕ ದೂರವಾಗಿದೆ.

ದಿನನಿತ್ಯ ಹೊಸದಾಗಿ ಪತ್ತೆಯಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆಯ ನಿರಾಳವಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಭಾನುವಾರ ಒಂದೇ ದಿನ 135 ಮಂದಿ ಗುಣಮುಖರಾಗಿ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 53 ಮಂದಿ, ಮಾಲೂರು ತಾಲ್ಲೂಕಿನ 24, ಬಂಗಾರಪೇಟೆ ತಾಲ್ಲೂಕಿನ 15, ಕೆಜಿಎಫ್‌ ತಾಲ್ಲೂಕಿನ 20, ಮುಳಬಾಗಿಲು ತಾಲ್ಲೂಕಿನ 10 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 13 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ಇದರ ಬೆನ್ನೆಲ್ಲೇ ಹೊಸದಾಗಿ 42 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 683ಕ್ಕೆ ಏರಿಕೆಯಾಗಿದೆ. ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 18 ಮಂದಿಗೆ ಸೋಂಕು ತಗುಲಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವ 9 ಮಂದಿಗೆ ಸೋಂಕು ಹರಡಿದ್ದು, ಈ ಪೈಕಿ ಪೊಲೀಸ್‌ ಸಿಬ್ಬಂದಿಯೊಬ್ಬರು ಸೇರಿದ್ದಾರೆ. 5 ಮಂದಿ ಆರೋಗ್ಯ ಕಾರ್ಯಕರ್ತರಲ್ಲಿ, ಮೂವರು ಗರ್ಭಿಣಿಯರಲ್ಲಿ ಮತ್ತು ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ವ್ಯಕ್ತಿಯೊಬ್ಬರಲ್ಲಿ ಸೋಂಕು ಪತ್ತೆಯಾಗಿದೆ.

ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 6 ಮಂದಿಗೆ ಹಾಗೂ ಸೋಂಕಿತರ ಸಂಪರ್ಕದಿಂದ 8 ಮಂದಿಗೆ ಸೋಂಕು ಹರಡಿದೆ. ಬಂಗಾರಪೇಟೆ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ ಒಬ್ಬರಿಗೆ, ಆರೋಗ್ಯ ಕಾರ್ಯಕರ್ತರೊಬ್ಬರಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿಯೊಬ್ಬರಿಗೆ ಸೋಂಕು ಬಂದಿದೆ.

ವಿಷಮ ಶೀತ ಜ್ವರ: ಕೆಜಿಎಫ್‌ ತಾಲ್ಲೂಕಿನಲ್ಲಿ ಒಬ್ಬರಿಗೆ, ಮುಳಬಾಗಿಲು ತಾಲ್ಲೂಕಿನಲ್ಲಿ ಇಬ್ಬರಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನಲ್ಲಿ 4 ಮಂದಿಗೆ ಸೋಂಕು ತಗುಲಿದೆ. ಈ 7 ಮಂದಿಯೂ ವಿಷಮ ಶೀತ ಜ್ವರದಿಂದ ಬಳಲುತ್ತಿದ್ದಾರೆ.

ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಅಲ್ಲದೇ, ಸುರಕ್ಷತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT