ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರು ದಾಖಲೆ ಪ್ರಮಾಣದಲ್ಲಿ ಗುಣಮುಖ

Last Updated 19 ಸೆಪ್ಟೆಂಬರ್ 2020, 15:35 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ದಾಖಲೆ ಪ್ರಮಾಣದಲ್ಲಿ ಗುಣಮುಖರಾಗಿದ್ದು, ಆರೋಗ್ಯ ಇಲಾಖೆ ಕೊಂಚ ನಿರಾಳವಾಗಿದೆ.

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 112 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಶನಿವಾರ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 46 ಮಂದಿ, ಮಾಲೂರು ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ 19, ಬಂಗಾರಪೇಟೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 9 ಮಂದಿ, ಮುಳಬಾಗಿಲು ತಾಲ್ಲೂಕಿನ 10 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ಇದರ ಬೆನ್ನಲ್ಲೇ ಹೊಸದಾಗಿ 90 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 773ಕ್ಕೆ ಏರಿಕೆಯಾಗಿದೆ. ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 42 ಮಂದಿಗೆ, ಮಾಲೂರು ತಾಲ್ಲೂಕಿನ 8, ಬಂಗಾರಪೇಟೆ ತಾಲ್ಲೂಕಿನ 6, ಕೆಜಿಎಫ್‌ ತಾಲ್ಲೂಕಿನ 17, ಮುಳಬಾಗಿಲು ತಾಲ್ಲೂಕಿನ 3 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 14 ಮಂದಿಗೆ ಸೋಂಕು ತಗುಲಿದೆ.

ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT