ಸೋಮವಾರ, ಜನವರಿ 17, 2022
19 °C

ಕೆಜಿಎಫ್‌: ಬೆಮಲ್‌ ಮೆಡಿಕಲ್ ಸೆಂಟರ್ ಸಿಬ್ಬಂದಿಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಜಿಎಫ್‌: ತಾಲ್ಲೂಕಿನಲ್ಲಿ ಬುಧವಾರ 116 ಮಂದಿ ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ. ಬೆಮಲ್‌ ನಗರದಲ್ಲಿ ಸೋಂಕು ತೀವ್ರ ಪ್ರಮಾಣದಲ್ಲಿ ಹರಡಿದ್ದು, ಬೆಮಲ್‌ ಮೆಡಿಕಲ್‌ ಸೆಂಟರ್‌ನ ವೈದ್ಯರು, ಸಿಬ್ಬಂದಿ ಸೇರಿ 18 ಮಂದಿಗೆ ಸೋಂಕು ತಗುಲಿದೆ.

ಮೆಡಿಕಲ್‌ ಸೆಂಟರ್‌ನಲ್ಲಿ ಹೊರ ರೋಗಿಗಳ ವಿಭಾಗ ಹೊರತುಪಡಿಸಿ, ಉಳಿದ ವಿಭಾಗಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಬೆಮಲ್‌ ಕಾರ್ಖಾನೆಯ ಮೂವತ್ತಕ್ಕೂ ಹೆಚ್ಚು ಕಾರ್ಮಿಕರಿಗೆ ಕೂಡ ಸೋಂಕು ಕಾಣಿಸಿಕೊಂಡಿದೆ.

ಕಳೆದ ಒಂದೆರಡು ದಿನಗಳಿಂದ ಗ್ರಾಮೀಣ ಭಾಗದಲ್ಲಿ ಕೂಡ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಬೆಮಲ್‌ನಲ್ಲಿ 10 ಮತ್ತು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ 26 ರೋಗಿಗಳನ್ನು ದಾಖಲು ಮಾಡಲಾಗಿದೆ. ಇಬ್ಬರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಅವರಿಗೆ ಆಮ್ಲಜನಕ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.