ಕೋಲಾರ: ಬೆಳೆ ಪರಿಹಾರ ವಿತರಣೆಯಲ್ಲಿನ ಲೋಪದೋಷ ಸರಿಪಡಿಸಿ ರೈತರಿಗೆ ಶೀಘ್ರವೇ ಪರಿಹಾರ ಧನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಶುಕ್ರವಾರ ತೋಟಗಾರಿಕೆ ಇಲಾಖೆ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಿದರು.

‘ತೋಟಗಾರಿಕೆ ಇಲಾಖೆ ಅಧಿಕಾರಿಗಳು ಬೆಳೆ ಪರಿಹಾರದ ಹಣ ಬಿಡುಗಡೆ ಮಾಡಲು ಮೀನಮೇಷ ಎಣಿಸುತ್ತಿದ್ದಾರೆ. ರೈತರು ಪರಿಹಾರ ಮೊತ್ತಕ್ಕಾಗಿ ಕಚೇರಿಯಿಂದ ಕಚೇರಿಗೆ ಅಲೆಯುವಂತಾಗಿದೆ. ಅಧಿಕಾರಿಗಳಿಗೆ ರೈತರ ಸಂಕಷ್ಟದ ಅರಿವಿಲ್ಲ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಕೋವಿಡ್–19 ಕಾರಣಕ್ಕೆ ಲಾಕ್ಡೌನ್ ಜಾರಿಯಾಗಿದ್ದರಿಂದ ಕೃಷಿ ಉತ್ಪನ್ನಗಳ ಬೆಲೆ ಕುಸಿದು ರೈತರು ಸಂಕಷ್ಟಕ್ಕೆ ಸಿಲುಕಿದರು. ರೈತರ ಅನುಕೂಲಕ್ಕಾಗಿ ಸರ್ಕಾರ ಬೆಳೆ ಪರಿಹಾರ ಘೋಷಿಸಿತು. ಆದರೆ, ಈವರೆಗೂ ಪರಿಹಾರದ ಹಣ ರೈತರ ಕೈ ಸೇರಿಲ್ಲ. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ಬೆರಳೆಣಿಕೆ ರೈತರಿಗೆ ಮಾತ್ರ ಬೆಳೆ ಪರಿಹಾರ ನೀಡಲಾಗಿದೆ’ ಎಂದು ಸಂಘಟನೆ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂರಿದರು.

‘ಲಾಕ್ಡೌನ್ ಸಂದರ್ಭದಲ್ಲಿ ಸರಕು ಸಾಗಣೆ ಸೇವೆ ಸ್ಥಗಿತಗೊಂಡಿದ್ದರಿಂದ ಮತ್ತು ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆಯಿಲ್ಲದ ಕಾರಣ ರೈತರು ಸಾವಿರಾರು ಹೆಕ್ಟೇರ್ ಬೆಳೆ ನಾಶಪಡಿಸಿದರು. ಬಳಿಕ ಸರ್ಕಾರ ಬೆಳೆ ಪರಿಹಾರ ನೀಡುವುದಾಗಿ ಹೇಳಿತು. ಆದರೆ, ಸರ್ಕಾರದ ಭರವಸೆ ಘೋಷಣೆಗೆ ಮಾತ್ರ ಸೀಮಿತವಾಗಿದೆ’ ಎಂದು ಹೇಳಿದರು.

ತಪ್ಪು ಸಮೀಕ್ಷೆ: ‘ಬೆಳೆ ಪರಿಹಾರಕ್ಕಾಗಿ ಬಹುಪಾಲು ರೈತರು ಸೂಕ್ತ ದಾಖಲೆಪತ್ರಗಳೊಂದಿಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಬೆಳೆ ಸಮೀಕ್ಷೆ ಮಾಡುವ ಅಧಿಕಾರಿಗಳು ಬೇಜವಾಬ್ದಾರಿಯಿಂದ ಬೆಳೆಗಳ ವಿವರ ತಪ್ಪಾಗಿ ನಮೂದಿಸಿದ್ದಾರೆ. ಹೂವು ಬೆಳೆದ ಜಮೀನಿನಲ್ಲಿ ರಾಗಿ ಬೆಳೆ, ತರಕಾರಿ ಬೆಳೆದ ಜಮೀನಿನಲ್ಲಿ ನೀಲಗಿರಿ ಎಂದು ನಮೂದಿಸಿದ್ದಾರೆ’ ಎಂದು ಧರಣಿನಿರತರು ಆರೋಪಿಸಿದರು.

‘ರಾಜಕೀಯ ಪ್ರಭಾವ ಇರುವವರಿಗೆ ಮತ್ತು ಬಲಾಢ್ಯರಿಗೆ ಮಾತ್ರ ಬೆಳೆ ಪರಿಹಾರ ನೀಡಲಾಗಿದೆ. ಬೆಳೆ ವಿವರ ತಪ್ಪಾಗಿ ನಮೂದಾಗಿರುವ ರೈತರಿಗೆ ಪರಿಹಾರ ಬಂದಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ಕಂಪ್ಯೂಟರ್ ಆಪರೇಟರ್ಗಳ ಲೋಪವೆಂದು ಹೇಳುತ್ತಾರೆ. ಅರ್ಹ ಫಲಾನುಭವಿಗಳು ಬೆಳೆ ಕಳೆದುಕೊಂಡು ಪರಿಹಾರವೂ ಸಿಗದೆ ಕಂಗಾಲಾಗಿದ್ದಾರೆ’ ಎಂದು ಕಿಡಿಕಾರಿದರು.

ಶಿಸ್ತುಕ್ರಮ ಜರುಗಿಸಿ: ‘ಬೆಳೆ ಪರಿಹಾರ ವಿತರಣೆಯಲ್ಲಿನ ಲೋಪ ಸರಿಪಡಿಸಬೇಕು. ಅರ್ಹ ಎಲ್ಲಾ ರೈತರಿಗೆ ಪರಿಹಾರ ನೀಡಬೇಕು. ತಪ್ಪಾಗಿ ಬೆಳೆ ವಿವರ ನಮೂದಿಸಿರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ, ಸದಸ್ಯರಾದ ಉಮಾ, ವರಮಹಾಲಕ್ಷ್ಮೀ, ಮಂಜುನಾಥ್, ನಾಗರಾಜಗೌಡ, ರವಿ, ಸುಪ್ರೀಂಚಲ, ಕೇಶವ, ನಾಗೇಶ್, ಸುಧಾಕರ್ ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.