ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಾವರಿಗೆ ಅನುದಾನ ಹೆಚ್ಚಳಕ್ಕೆ ಒತ್ತಾಯ

ರಾಜ್ಯ ಸರ್ಕಾರಕ್ಕೆ ರೈತ ಸಂಘ, ಹಸಿರು ಸೇನೆ ಒತ್ತಾಯ
Last Updated 27 ಫೆಬ್ರುವರಿ 2022, 4:09 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ರಾಜ್ಯ ಬಜೆಟ್‌ನಲ್ಲಿ ಕೋಲಾರ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದಿಂದ ಶುಕ್ರವಾರ ತಹಶೀಲ್ದಾರ್‌ಗೆ ಮನವಿ ಪತ್ರ
ಸಲ್ಲಿಸಲಾಯಿತು.

ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಉಪಾಧ್ಯಕ್ಷ ಬಿಸನಹಳ್ಳಿ ಬೈಚೇಗೌಡ ಮಾತನಾಡಿ, ‘ಸರ್ಕಾರ ಕೋಲಾರ ಜಿಲ್ಲೆಯ ಜನರ ಆರೋಗ್ಯದ ದೃಷ್ಟಿಯಿಂದ ಕೆ.ಸಿ ವ್ಯಾಲಿ ನೀರಾವರಿ ಯೋಜನೆಯ ಮೂರನೇ ಹಂತದ ಸಂಸ್ಕರಣಾ ಘಟಕವನ್ನು ಮಂಜೂರು ಮಾಡಬೇಕು. ರಾಜ್ಯದ ಒಟ್ಟು ಬಜೆಟ್‌ನಲ್ಲಿ ಶೇ 25ರಷ್ಟನ್ನು ನೀರಾವರಿ ಯೋಜನೆಗಳಿಗೆ ಮೀಸಲಿಡ ಬೇಕು. ಎತ್ತಿನಹೊಳೆ ಯೋಜನೆ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಬೇಕು’ ಎಂದು
ಒತ್ತಾಯಿಸಿದರು.

ಜಿಲ್ಲೆಯ ಕೆರೆಗಳು ಮತ್ತು ರಾಜಕಾಲುವೆಗಳ ಪುನರುಜ್ಜೀವನಕ್ಕೆ ಒತ್ತು ನೀಡಬೇಕು. ಬಜೆಟ್‌ನಲ್ಲಿ ₹ 5,000 ಕೋಟಿ ಆವರ್ತ ನಿಧಿ ಮೀಸಲಿಡಬೇಕು. ಎಂಎಸ್‌ಪಿ ದರದಲ್ಲಿ ಖರೀದಿ ಮಾಡುವ ಎಲ್ಲಾ ಕೃಷಿ ಉತ್ಪನ್ನಗಳು ಮಾರುಕಟ್ಟೆಗೆ ಬರುವ ಮೊದಲೇ ಖರೀದಿ ಕೇಂದ್ರ ಸ್ಥಾಪಿಸಬೇಕು ಎಂದು ಆಗ್ರಹಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT