ಕೋಲಾರ: ಜಾನುವಾರುಗಳನ್ನು ಬಾಧಿಸುತ್ತಿರುವ ಮಾರಕ ಕಾಯಿಲೆಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಬುಧವಾರ ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಕಚೇರಿ ಎದುರು ಧರಣಿ ನಡೆಸಿದರು.

‘ಜಿಲ್ಲೆಯ ರಾಸುಗಳಲ್ಲಿ ಚರ್ಮ ಗಂಟು ರೋಗ ಕಾಣಿಸಿಕೊಂಡಿದ್ದು, ರೈತರಿಗೆ ದಿಕ್ಕು ತೋಚದಂತಾಗಿದೆ. ರಾಸುಗಳಿಗೆ ಸಕಾಲಕ್ಕೆ ಚಿಕಿತ್ಸೆ ಸಿಗದ ಕಾರಣ ರೈತರು ಆತಂಕಗೊಂಡಿದ್ದಾರೆ. ಪಶು ವೈದ್ಯರು ಚರ್ಮ ಗಂಟು ರೋಗದ ಸಂಬಂಧ ರೈತರಿಗೆ ಮಾಹಿತಿ ನೀಡುತ್ತಿಲ್ಲ’ ಎಂದು ಧರಣಿನಿರತರು ಅಸಮಾಧಾನ ವ್ಯಕ್ತಪಡಿಸಿದರು.

‘ಹೈನೋದ್ಯಮವು ಜಿಲ್ಲೆಯ ರೈತರ ಜೀವನಾಡಿಯಾಗಿದೆ. ರೈತರು ಕೃಷಿ ಜತೆಗೆ ಉಪ ಕಸುಬಾಗಿ ಹೈನೋದ್ಯಮ ನಡೆಸುತ್ತಿದ್ದಾರೆ. ಇತ್ತೀಚೆಗೆ ಜಾನುವಾರುಗಳಲ್ಲಿ ಚರ್ಮ ಗಂಟು ರೋಗ ಮತ್ತು ಕಾಲುಬಾಯಿ ಜ್ವರ ಕಾಣಿಸಿಕೊಂಡಿದೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಹೇಳಿದರು.

‘ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಪಶು ಆಸ್ಪತ್ರೆಗಳ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಹೀಗಾಗಿ ರೈತರು ಆಂಧ್ರದ ಪುಂಗನೂರು, ಪಲಮನೇರು, ವಿಕೋಟೆ, ಕೃಷ್ಣಗಿರಿಯ ಪಶು ಆಸ್ಪತ್ರೆಗಳನ್ನು ಅವಲಂಬಿಸುವಂತಾಗಿದೆ. ಸರ್ಕಾರ ಪಶು ಆಸ್ಪತ್ರೆಗಳಿಗೆ ಅನುದಾನ ಬಿಡುಗಡೆ ಮಾಡಿದರೂ ರಾಸುಗಳಿಗೆ ಸಮರ್ಪಕ ವೈದ್ಯಕೀಯ ಸೇವೆ ಸಿಗುತ್ತಿಲ್ಲ’ ಎಂದು ಆರೋಪಿಸಿದರು.

ವೈದ್ಯರು ಲಭ್ಯರಿರುವುದಿಲ್ಲ: ‘ಮುಳಬಾಗಿಲು ತಾಲ್ಲೂಕಿನ ಪಶು ಆಸ್ಪತ್ರೆಗಳಲ್ಲಿ ಪಶು ವೈದ್ಯರು ಖಾಸಗಿ ಅಂಗಡಿಗಳಲ್ಲಿ ರಾಸುಗಳಿಗೆ ಔಷಧ, ಚುಚ್ಚುಮದ್ದು ಖರೀದಿಸುವಂತೆ ಚೀಟಿ ಬರೆದು ಕೊಡುತ್ತಾರೆ. ವೈದ್ಯರು ಹಣದಾಸೆಗೆ ಖಾಸಗಿ ಅಂಗಡಿಗಳ ಮಾಲೀಕರೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ’ ಎಂದು ಧರಣಿನಿರತರು ಕಿಡಿಕಾರಿದರು.

‘ರೈತರು ರಾಸುಗಳೊಂದಿಗೆ ಆಸ್ಪತ್ರೆಗೆ ಬಂದರೆ ವೈದ್ಯರು ಲಭ್ಯರಿರುವುದಿಲ್ಲ. ಈ ಬಗ್ಗೆ ವಿಚಾರಿಸಲು ವೈದ್ಯರಿಗೆ ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ರೈತರು ರಾಸುಗಳಿಗೆ ಚಿಕಿತ್ಸೆ ಕೊಡಿಸಲು ವೈದ್ಯರನ್ನು ಹುಡುಕಿಕೊಂಡು ಅಲೆಯುವ ಪರಿಸ್ಥಿತಿಯಿದೆ. ಆಸ್ಪತ್ರೆಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ರೈತರು ಲಂಚ ಕೊಡದಿದ್ದರೆ ವೈದ್ಯರು ರಾಸುಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುತ್ತಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುತ್ತಿಗೆ ಎಚ್ಚರಿಕೆ: ‘ಕಾರ್ಯ ಸ್ಥಳದಲ್ಲಿ ಇರದ ಪಶು ವೈದ್ಯರನ್ನು ಸೇವೆಯಿಂದ ಅಮಾನತು ಮಾಡಬೇಕು. ರಾಸುಗಳಿಗೆ ಅಗತ್ಯವಿರುವ ಚುಚ್ಚುಮದ್ದು, ಔಷಧ ಹಾಗೂ ಮಾತ್ರೆಗಳನ್ನು ಆಸ್ಪತ್ರೆಗಳಿಗೆ ನಿಯಮಿತವಾಗಿ ಪೂರೈಸಬೇಕು. ಚರ್ಮ ಗಂಟು ರೋಗ ಮತ್ತು ಕಾಲು ಬಾಯಿ ಜ್ವರದ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಬೇಕು. ಇಲ್ಲದಿದ್ದರೆ ಜಾನುವಾರುಗಳ ಜತೆ ಕಚೇರಿಗೆ ಮುತ್ತಿಗೆ ಹಾಕುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಸಂಘಟನೆಯ ಕೋಲಾರ ತಾಲ್ಲೂಕು ಘಟಕದ ಅಧ್ಯಕ್ಷ ಇ.ಮಂಜುನಾಥ್, ಬಂಗಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್, ಕೆಜಿಎಫ್ ತಾಲ್ಲೂಕು ಘಟಕದ ಅಧ್ಯಕ್ಷ ಶಿವು, ಮುಳಬಾಗಿಲು ತಾಲ್ಲೂಕು ಘಟಕದ ಅಧ್ಯಕ್ಷ ಫಾರೂಕ್ ಪಾಷಾ, ಮಾಲೂರು ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶ್, ಶ್ರೀನಿವಾಸಪುರ ತಾಲ್ಲೂಕು ಘಟಕದ ಅಧ್ಯಕ್ಷ ಆಂಜಿನಪ್ಪ ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.