ಶುಕ್ರವಾರ, ಜನವರಿ 22, 2021
25 °C
ಕೆಜಿಎಫ್‌ ತಾಲ್ಲೂಕಿನ ಗ್ರಾ.ಪಂ.ಗಳಿಗೆ ರೂಪಕಲಾ ಭೇಟಿ

ಗ್ರಾಮಾಭಿವೃದ್ಧಿಗೆ ಒತ್ತು ನೀಡಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆಜಿಎಫ್‌: ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರೇ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕಿ ಎಂ. ರೂಪಕಲಾ ವಿಶ್ವಾಸ ವ್ಯಕ್ತಪಡಿಸಿದರು.

ತಾಲ್ಲೂಕಿನ ರಾಮಸಾಗರ, ವೆಂಗಸಂದ್ರ, ಎನ್‌.ಜಿ. ಹುಲ್ಕೂರು, ಮಾರಿಕುಪ್ಪ, ಜಕ್ಕರಸನಕುಪ್ಪ, ಹುಲ್ಕೂರು, ಕಮ್ಮಸಂದ್ರ ಮತ್ತು ಶ್ರೀನಿವಾಸಸಂದ್ರ ಗ್ರಾಮ ಪಂಚಾಯಿತಿಗಳಿಗೆ ಸೇರಿದ ನೂತನ ಸದಸ್ಯರನ್ನು ಬುಧವಾರ ಭೇಟಿ ಮಾಡಿದ ಬಳಿಕ ಅವರು ಮಾತನಾಡಿದರು.

ಅಭಿವೃದ್ಧಿಯನ್ನು ಮನಸ್ಸಿನಲ್ಲಿಟ್ಟು ಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಬೇಕು ಎಂದು ಕೋರಿದರು.

ಪಂಚಾಯಿತಿ ಚುನಾವಣೆಯಲ್ಲಿ ಕೂಡ ಗ್ರಾಮೀಣ ಜನತೆ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮತ ಚಲಾವಣೆ ಮಾಡಿದ್ದಾರೆ. ಅವರ ಆಶಯಕ್ಕೆ ತಕ್ಕಂತೆ ಆಡಳಿತ ನಡೆಸಬೇಕಾಗಿದೆ ಎಂದರು.

ಮುಖಂಡರಾದ ಪದ್ಮನಾಭ ರೆಡ್ಡಿ, ನಾರಾಯಣರೆಡ್ಡಿ, ನಾಗರಾಜ್‌, ಕೃಷ್ಣಪ್ಪ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.