ಬಂಗಾರಪೇಟೆ (ಕೋಲಾರ ಜಿಲ್ಲೆ): ಶಾಸಕ ಹಾಗೂ ಬಂಗಾರಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಎನ್.ನಾರಾಯಣಸ್ವಾಮಿ ಅವರಿಗೆ ಆದಾಯ ತೆರಿಗೆ (ಐ.ಟಿ) ಇಲಾಖೆ ನೋಟಿಸ್ ನೀಡಿರುವುದು ತಿಳಿದುಬಂದಿದೆ.

ಮೇ 9ರಂದು (ಮಂಗಳವಾರ) 3.30ಕ್ಕೆ ಕಚೇರಿಗೆ ಹಾಜರಾಗುವಂತೆ ಅವರಿಗೆ ಇಲಾಖೆ ನಿರ್ದೇಶಿಸಿರುವುದು ಗೊತ್ತಾಗಿದೆ.

‘ನೋಟಿಸ್ ಬಂದಿರುವುದು ನಿಜ’ ಎಂದು ಶಾಸಕರ ಆಪ್ತ ಮೂಲಗಳು ತಿಳಿಸಿವೆ.

ತಾಲ್ಲೂಕಿನ ಜಿಯೋನ್ ಹಿಲ್ಸ್ ಗಾಲ್ಸ್ ರೆಸಾರ್ಟ್ನ ವಿಲ್ಲಾ ಮೇಲೆ ಕೆಜಿಎಫ್ ಪೊಲೀಸರು ಈಚೆಗೆ ದಾಳಿ ನಡೆಸಿ ಅಕ್ರಮವಾಗಿ ಇಟ್ಟಿದ್ದ ₹ 4.04 ಕೋಟಿ ವಶಕ್ಕೆ ಪಡೆದಿದ್ದರು. ಅಲ್ಲದೇ, ಶಾಸಕ ನಾರಾಯಣಸ್ವಾಮಿ ಹಾಗೂ ಉದ್ಯಮಿ ರಮೇಶ್ ಯಾದವ್ ಅವರ ಮೇಲೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.