‘ಕೃಷ್ಣಾ ನೀರು ಹಂಚಿಕೆಗೆ ಆಂಧ್ರ ಶಾಸಕ ಜತೆ ಚರ್ಚೆ’
ಕೋಲಾರ ಜಿಲ್ಲೆಗೆ ಕೃಷ್ಣಾ ನದಿಯ ನೀರು ಹರಿಸುವ ನಿಟ್ಟಿನಲ್ಲಿ ಎರಡು ತಿಂಗಳ ಹಿಂದೆ ಆಂಧ್ರಪ್ರದೇಶದ ಮದನಪಲ್ಲಿ ಶಾಸಕ ಜೊತೆ ಚರ್ಚೆ ಮಾಡಿದ್ದೇನೆ. ಅಲ್ಲಿನ ಜಲಾಶಯದಿಂದ ಕೋಲಾರಕ್ಕೆ ನೀರು ಹರಿಸಲು ಅಭ್ಯಂತರವಿಲ್ಲ ಎಂದು ತಿಳಿಸಿದ್ದಾರೆ ಎಂದು ಸಂಸದ ಮಲ್ಲೇಶಬಾಬು ಹೇಳಿದ್ದಾರೆ.
ಅಕ್ಟೋಬರ್‌ನಲ್ಲಿ ಚಿಂತಾಮಣಿಗೆ ಭೇಟಿ ನೀಡಲಿರುವ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ ಯೋಜನೆಯ ರೂಪುರೇಷೆಗಳನ್ನು ವಿವರಿಸಲಾಗುವುದು. ಆ ಬಳಿಕ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಮೂಲಕ ಆಂಧ್ರಪ್ರದೇಶದ ಮುಖ್ಯಮಂತ್ರಿಗೆ ನೀರು ಹರಿಸುವಂತೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.