ಕೋಲಾರ: ತಾಲ್ಲೂಕಿನ ವೇಮಗಲ್–ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆಗೆ ಬಿಜೆಪಿಯಿಂದ 9 ಹಾಗೂ ಜೆಡಿಎಸ್ ಪಕ್ಷದಿಂದ 8 ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಿದ್ದು, ಎಲ್ಲಾ 17 ವಾರ್ಡ್ಗಳಲ್ಲಿ ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದು ಬಿಜೆಪಿ–ಜೆಡಿಎಸ್ ಮೈತ್ರಿ ಪಕ್ಷದ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಪಿ.ಸಿ ಬಡಾವಣೆಯಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಅವರ ಕಚೇರಿಯಲ್ಲಿ ಭಾನುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ‘ಮೈತ್ರಿ ಪಕ್ಷಗಳ ಮುಖಂಡರ ಸಭೆ ಬಳಿಕ ಚುನಾವಣೆಗೆ 17 ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಪ್ರತಿ ವಾರ್ಡ್ಗೆ ಮೂರ್ನಾಲ್ಕು ಆಕಾಂಕ್ಷಿಗಳು ಇದ್ದ ಕಾರಣ ಹೆಚ್ಚು ಚರ್ಚೆ ನಡೆಯಿತು. ನಂತರ ಸೂಕ್ತ ಅಭ್ಯರ್ಥಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ಒಗ್ಗಟ್ಟಾಗಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇವೆ’ ಎಂದರು.

‘ಅಭ್ಯರ್ಥಿಗಳ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಆಡಳಿತ ವಿರೋಧಿ ಅಲೆ ಇದ್ದು, ಎನ್ಡಿಎ ಮೈತ್ರಿಕೂಟದ ಎಲ್ಲಾ ಅಭ್ಯರ್ಥಿಗಳ ಗೆಲುವು ಖಚಿತ’ ಎಂದು ಹೇಳಿದರು.

‘ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿದ್ದಾರೆ. ಮಾಜಿ ಸಚಿವ ವರ್ತೂರ್ ಪ್ರಕಾಶ್ ಬೆಂಬಲಿಗರಾಗಿಯೇ ಸ್ಪರ್ಧೆ ಮಾಡುತ್ತಿದ್ದಾರೆ’ ಎಂದರು.

ಸಂಸದ ಎಂ.ಮಲ್ಲೇಶ್ ಬಾಬು ಮಾತನಾಡಿ, ‘ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡಲಿದ್ದೇವೆ. ಒಮ್ಮತದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ಅವರ ಗೆಲುವಿಗಾಗಿ ಎರಡೂ ಪಕ್ಷಗಳು ಮುಖಂಡರು ಶ್ರಮಿಸಬೇಕು’ ಎಂದು ಹೇಳಿದರು.

‘ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ವಿಚಾರಗಳನ್ನು ಮುಂದೆ ಇಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ. ಮೋದಿ ಸರ್ಕಾರದ ಕೆಲಸಗಳನ್ನು ಜನರಿಗೆ ಹೇಳುತ್ತೇವೆ’ ಎಂದು ನುಡಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂ ಶಕ್ತಿ ಚಲಪತಿ ಮಾತನಾಡಿ, ‘ಸಭೆಯಲ್ಲಿ ಪ್ರತಿ ವಾರ್ಡ್ನ ಪರಿಸ್ಥಿತಿ ಬಗ್ಗೆ ಚರ್ಚಿಸಿದೆವು. ಆ ಭಾಗದಲ್ಲಿ ವರ್ತೂರು ಪ್ರಕಾಶ್ ಹಾಗೂ ಸಿಎಂಆರ್ ಶ್ರೀನಾಥ್ ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಸೋತರೂ ಜನರ ಜೊತೆ ಇದ್ದಾರೆ’ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ವೈ.ಎ.ನಾರಾಯಣಸ್ವಾಮಿ ಮಾತನಾಡಿ, ‘ಆ.17ರಂದು ನಡೆಯಲಿರುವ ವೇಮಗಲ್ –ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ (ಆ.5) ಕೊನೆಯ ದಿನವಾಗಿದ್ದು, ಈ ನಿಟ್ಟಿನಲ್ಲಿ ಬಿಜೆಪಿ–ಜೆಡಿಎಸ್ ಚುನಾವಣೆಗೆ ಸಿದ್ಧವಾಗಿವೆ. ಹಿರಿಯರ ಸಲಹೆ ಸೂಚನೆಗಳಂತೆ ಉತ್ತಮ ಹಾಗೂ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ’ ಎಂದು ಹೇಳಿದರು.

‘ವಾರದಿಂದ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದು 2 ವರ್ಷ 2 ತಿಂಗಳಾಗಿದ್ದರೂ ಒಂದು ಹಿಡಿಯಷ್ಟು ಮಣ್ಣು ಹಾಕಲು ಅವರಿಗೆ ಸಾಧ್ಯವಾಗಿಲ್ಲ. ಯಾವುದೇ ರೀತಿಯ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ತೆರಿಗೆ ಹೆಚ್ಚಳ, ಬೆಲೆ ಏರಿಕೆಯಲ್ಲಿ ತೊಡಗಿದ್ದಾರೆ’ ಎಂದರು.

ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್, ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್, ಮಾಜಿ ಶಾಸಕ ಕೆ.ಎಸ್.ಮಂಜುನಾಥ್ಗೌಡ, ತಾಲ್ಲೂಕು ಅಧ್ಯಕ್ಷ ಬಾಬು ಮೌನಿ, ಮುಖಂಡರಾದ ಬಣಕನಹಳ್ಳಿ ನಟರಾಜ್, ಬೆಗ್ಲಿ ಪ್ರಕಾಶ್, ಬಂಕ್ ಮಂಜು, ವೆಂಕಟಮುನಿಯಪ್ಪ ಪಾಲ್ಗೊಂಡಿದ್ದರು.

ಎರಡು ವರ್ಷಗಳಿಂದ ಆಡಳಿತ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ತೆರಿಗೆ ಸರ್ಕಾರವಾಗಿದೆ. ಪ್ರತಿಯೊಂದರಲ್ಲೂ ತೆರಿಗೆ ಹೆಚ್ಚಿಸುತ್ತಿದ್ದಾರೆ. ಈ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಶೂನ್ಯ

ಎಂ.ಮಲ್ಲೇಶ್ ಬಾಬು ಸಂಸದ ಜೆಡಿಎಸ್ ಮುಖಂಡ

ಪ.ಪಂ ಚುನಾವಣೆಯಲ್ಲಿ ನಮ್ಮ ಮುಖ್ಯ ಗುರಿ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವು. ಎರಡೂ ಪಕ್ಷಗಳು ನಾಯಕರು ಸಭೆಯಲ್ಲಿ ಚರ್ಚಿಸಿ ಅಭ್ಯರ್ಥಿ ಆಯ್ಕೆ ಮಾಡಿದ್ದೇವೆ. ಗೆಲುವು ಮಾನದಂಡವಾಗಿದೆ

ಓಂಶಕ್ತಿ ಚಲಪತಿ ಬಿಜೆಪಿ ಜಿಲ್ಲಾ ಅಧ್ಯಕ್ಷ

ಮಾಲೂರು ಕ್ಷೇತ್ರದಲ್ಲೂ ದುರ್ಬಳಕೆ

‘ಮಾಲೂರು ವಿಧಾನಸಭಾ ಕ್ಷೇತ್ರದ ಮತ ಎಣಿಕೆಯಲ್ಲೂ ಅವ್ಯವಹಾರ ನಡೆದಿದೆ. ಮೊದಲು ಈ ಕ್ಷೇತ್ರದ ವಿಚಾರವಾಗಿ ರಾಹುಲ್ ಗಾಂಧಿ ಪ್ರತಿಭಟಿಸಬೇಕು. ಆಗ ನಾನೂ ಅವರೊಂದಿಗೆ ಪ್ರತಿಭಟನೆಗೆ ಕೈಜೋಡಿಸುತ್ತೇನೆ’ ಎಂದು ಮಾಜಿ ಶಾಸಕ ಬಿಜೆಪಿಯ ಕೆ.ಎಸ್.ಮಂಜುನಾಥಗೌಡ ಹೇಳಿದರು. ‘ವಿಧಾನಸಭೆಯಲ್ಲಿ ಚುನಾವಣೆಯ ಮಾಲೂರು ಕ್ಷೇತ್ರ ಹಾಗೂ ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆಗೆ ಒತ್ತಾಯ ಮಾಡುತ್ತೇವೆ’ ಎಂದರು. ‘ಮಾಲೂರು ಕ್ಷೇತ್ರದ ಮರು ಮತ ಎಣಿಕೆ ಮಾಡಬೇಕೆಂದು ನಾನು ಹಾಕಿರುವ ತಕರಾರು ಅರ್ಜಿಯ ವಿಚಾರವಾಗಿ ನ್ಯಾಯಾಲಯವು ತೀರ್ಪು ಕಾಯ್ದಿರಿಸಿದೆ. ಯಾವ ರೀತಿ ತೀರ್ಪು ಬರಲಿದೆ ಎಂಬುದನ್ನು ಕಾದು ನೋಡೋಣ’ ಎಂದು ಹೇಳಿದರು. ‘ಮತಗಳ್ಳತನವಾಗಿದ್ದರೆ ಚುನಾವಣೆ ನಡೆದ ಮೂರು ತಿಂಗಳೊಳಗೆ ರಾಹುಲ್ ಗಾಂಧಿ ದೂರು ನೀಡಬೇಕಿತ್ತು. ವರ್ಷ ಕಳೆದ ಮೇಲೆ ಹೇಳುತ್ತಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ನೋಂದಣಿಯಾಗಿ 10 ವರ್ಷ ಆದ ಮೇಲೆ ಕೇಸು ದಾಖಲಿಸಿದಂತಾಯಿತು’ ಎಂದು ವ್ಯಂಗ್ಯವಾಡಿದರು.

‘ಮತಗಳ್ಳತನ ಆರೋಪ; ರಾಹುಲ್ ಅಪ್ರಬುದ್ಧ’

‘ಮತಗಳ್ಳತನದ ಆರೋಪ ಮಾಡುತ್ತಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒಬ್ಬ ಅಪ್ರಬುದ್ಧ. ತಮ್ಮ ಪಕ್ಷದ ಅಭ್ಯರ್ಥಿಗಳು ಗೆದ್ದರೆ ಮತಗಳ್ಳತನವಾಗಿಲ್ಲ; ಬಿಜೆಪಿ ಮತ್ತು ಮೈತ್ರಿ ಪಕ್ಷಗಳು ಗೆದ್ದರೆ ಮಾತ್ರ ಮತಗಳ್ಳತನವಾಗುತ್ತದೆ ಎನ್ನುವುದು ಎಷ್ಟರಮಟ್ಟಿಗೆ ಸರಿ’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಪ್ರಶ್ನಿಸಿದರು. ‘ಚುನಾವಣೆ ಆಯೋಗ ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು ಅಂಥ ಸಂಸ್ಥೆಗೆ ರಾಹುಲ್ ಗಾಂಧಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಅವರ ಹೇಳಿಕೆ ಖಂಡನೀಯ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಹುಲ್ ಹೇಳಿಕೆಗೆ ತುತ್ತೂರಿ ಊದುತ್ತಿದ್ದಾರೆ’ ಎಂದು ಟೀಕಿಸಿದರು. ‘ಸಂವಿಧಾನ ರಕ್ಷಣೆಗಾಗಿ ಹಾಗೂ ಮತಗಳ್ಳತನ ಆರೋಪಕ್ಕೆ ದಾಖಲೆಗೆ ಕೊಡುವಂತೆ ಒತ್ತಾಯಿಸಿ ಬಿಜೆಪಿಯಿಂದಲೂ ಆ.5 ರಂದು ಬೆಂಗಳೂರಿನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಧರಣಿ ಹಮ್ಮಿಕೊಳ್ಳಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.