ಪ್ರಜಾವಾಣಿ ವಾರ್ತೆ

ಕೋಲಾರ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಸುಗಟೂರು ಹೋಬಳಿ ಭಾಗದ ಜೆಡಿಎಸ್ನ ಪ್ರಭಾವಿ ಮುಖಂಡ ಕಿತ್ತಂಡೂರು ಕೆ.ಎಸ್.ನಂಜುಂಡಪ್ಪ (54) ಅನಾರೋಗ್ಯದಿಂದ ಮಂಗಳವಾರ ಬೆಳಿಗ್ಗೆ ನಿಧನರಾದರು.

ಅವರಿಗೆ ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರ ಇದ್ದಾರೆ. ಸಂಜೆ 4 ಗಂಟೆಗೆ ಕಿತ್ತಂಡೂರು ಗ್ರಾಮದ ತೋಟದ ಮನೆಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಕಿತ್ತಂಡೂರು ನಂಜುಂಡಪ್ಪ ಅವರು ಶ್ರೀನಿವಾಸಪುರ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅವರಿಗೆ ಆಪ್ತರಾಗಿದ್ದರು. ಅವರ ಅಣ್ಣ ಮಂಜುನಾಥ್ ತೊಟ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ.

ಮೆದುಳಿನ ಸಮಸ್ಯೆಗೆ ಒಳಗಾಗಿದ್ದ ನಂಜುಂಡಪ್ಪ, ಕೆಲವು ದಿನಗಳಿಂದ ಮೂತ್ರಕೋಶ ವೈಫಲ್ಯ ಹಾಗೂ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು.

ಶಾಸಕರಾದ ಜಿ.ಕೆ.ವೆಂಕಟಶಿವಾರೆಡ್ಡಿ, ಸಮೃದ್ಧಿ ಮಂಜುನಾಥ್, ಸಂಸದ ಎಂ.ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯರಾದ ಇಂಚರ ಗೋವಿಂದರಾಜು, ಎಂ.ಎಲ್.ಅನಿಲ್ ಕುಮಾರ್, ಮಾಜಿ ಸಚಿವ ವರ್ತೂರು ಪ್ರಕಾಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಮಂಗಮ್ಮ ಮುನಿಸ್ವಾಮಿ, ಜೆಡಿಎಸ್ ಮುಖಂಡರಾದ ಸಿ.ಎಂ.ಆರ್.ಶ್ರೀನಾಥ್, ಡಾ.ರಮೇಶ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ, ಮುಖಂಡ ಶೇಷಾಪುರ ಗೋಪಾಲ್ ಸೇರಿದಂತೆ ಹಲವು ಮುಖಂಡರು ಅಂತಿಮ ದರ್ಶನ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.