ಜೆಡಿಎಸ್ ಸಭೆ ನಾಳೆ
ಕೋಲಾರ: ತಾಲ್ಲೂಕು ಜೆಡಿಎಸ್ ಪಕ್ಷದಿಂದ ಜ. 16ರಂದು ಮಧ್ಯಾಹ್ನ 2ಗಂಟೆಗೆ ನಗರದಲ್ಲಿ ರೈತ ಸಂಕ್ರಾಂತಿ ಹಾಗೂ ಕೋಲಾರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿದೆ.
ನಗರದ ಕ್ಲಾಕ್ ಟವರ್ ಕುತುಬ್ ಮಹಲ್ ದರ್ಗಾದಲ್ಲಿ ಅಲ್ಪಸಂಖ್ಯಾತರ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ನಗರ ಹೊರವಲಯದ ಸಿಎಂಆರ್ ಮಂಡಿ ಬಳಿ ಮಧ್ಯಾಹ್ನ 2 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗಲಿದೆ.
ಜೆಡಿಎಸ್ ರಾಜ್ಯ ಘಟಲದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ, ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಜಿಲ್ಲಾ ಅಧ್ಯಕ್ಷ ಜಿ.ಕೆ. ವೆಂಕಟಾಶಿವಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳು, ಮುಖಂಡರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷೆ ಕುರ್ಕಿ ರಾಜೇಶ್ವರಿ ತಿಳಿಸಿದ್ದಾರೆ.
ಸಂಜೆ 4 ಗಂಟೆಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ವರ್ಚುವಲ್ ವೇದಿಕೆ ಮೂಲಕ ಸಂಕ್ರಾಂತಿ ಶುಭಾಶಯ ಕೋರಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.