ಕೋಲಾರ: ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವು 2021-22ನೇ ಸಾಲಿನಲ್ಲಿ ಜೀವಜಲ ಯೋಜನೆಯಡಿ ಸೌಲಭ್ಯ ಪಡೆಯ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-3ಬಿಗೆ ಸೇರಿದ ವೀರಶೈವ ಲಿಂಗಾಯತ ಸಮುದಾಯದವರಿಂದ ಅರ್ಜಿ ಆಹ್ವಾನಿಸಿದೆ.

ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರದ ಸಣ್ಣ ಮತ್ತು ಅತಿ ಸಣ್ಣ ರೈತರು, ವಾರ್ಷಿಕ ವರಮಾನ ₹ 40 ಸಾವಿರದೊಳಗೆ ಇರುವವರು ಅರ್ಜಿ ಸಲ್ಲಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯ ಪ್ರಯೋಜನ ಪಡೆದಿದ್ದರೆ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸುವಂತಿಲ್ಲ. ಜೀವಜಲ ಯೋಜನೆ ಸೌಲಭ್ಯ ಪಡೆಯಲು ಇಚ್ಚಿಸುವವರು ಕೋಲಾರ ಜಿಲ್ಲಾಡಳಿತದ ಭವನದಲ್ಲಿನ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿಮೇ 10ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಿಗಮದ ವೆಬ್ಸೈಟ್ ಅಥವಾ 080 22865522 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.