ಕೋಲಾರ: ‘ಪ್ರಜಾವಾಣಿ’ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಜಿಲ್ಲಾ ಕೇಂದ್ರದಲ್ಲಿ ಶುಕ್ರವಾರ (ಏ.23) ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಕೇಂದ್ರದ ಅಂತರಗಂಗೆ ಬೆಟ್ಟದ ರಸ್ತೆಯಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಿಗ್ಗೆ 10.30ಕ್ಕೆ ನೇರ ಸಂದರ್ಶನ ನಡೆಯಲಿದೆ. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರುವ 18 ವರ್ಷದಿಂದ 40 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಸಂದರ್ಶನಕ್ಕೆ ಬರಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂದರ್ಶನಕ್ಕೆ ಹಾಜರಾಗುವವರು ವಿದ್ಯಾರ್ಹತೆ ಮತ್ತು ಸ್ವವಿವರದ ದಾಖಲೆಪತ್ರ, ಅಂಕಪಟ್ಟಿಗಳನ್ನು ತರಬೇಕು. ಆಸಕ್ತರು ಹೆಚ್ಚಿನ ಮಾಹಿತಿಗೆ 6360609726, 9606931760, 9606931740 ಅಥವಾ 6360432904 ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.