ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ಮೇಳ: ಪ್ರಚಾರಕ್ಕೆ ಚಾಲನೆ

Last Updated 7 ಫೆಬ್ರುವರಿ 2020, 15:04 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಫೆ.11 ಮತ್ತು 12ರಂದು ನಡೆಯಲಿರುವ ಬೃಹತ್ ಉದ್ಯೋಗ ಮೇಳದ ಪ್ರಚಾರಕ್ಕೆ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಶುಕ್ರವಾರ ಚಾಲನೆ ನೀಡಿದರು.

ಜಿಲ್ಲಾಧಿಕಾರಿ ಜೆ.ಮಂಜುನಾಥ್ ಮಾತನಾಡಿ, ‘ಜಿಲ್ಲೆಯಲ್ಲಿನ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡಬೇಕು ಎಂಬ ಉದ್ದೇಶದಿಂದ ಉದ್ಯೋಗ ಮೇಳ ಆಯೋಜಿಸಲಾಗುತ್ತಿದ್ದು, ವ್ಯಾಪಕ ಪ್ರಚಾರ ನಡೆಸಬೇಕು’ ಎಂದು ಸೂಚಿಸಿದರು.

‘ಜಿಲ್ಲೆಯಲ್ಲಿ ಫೆ.11ಮತ್ತು 12ರಂದು ಸಿಬಿಐಟಿ ಕಾಲೇಜಿನಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳದ ನೋಂದಣಿ ವೆಬ್‌ಸೈಟ್‌ಗೆ ಚಾಲನೆ ನೀಡಲಾಗಿದ್ದು, ಇಲ್ಲಿಯ ತನಕ 10,500ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ನೊಂದಣಿ ಮಾಡಿಕೊಂಡಿದ್ದಾರೆ’ ಎಂದರು.

‘ಮೇಳದಲ್ಲಿ 200ಕ್ಕೂ ಹೆಚ್ಚು ಕಂಪನಿಗಳಿಗೆ ಆಹ್ವಾನ ನೀಡಲಾಗಿ. ಈಗಾಗಲೇ 100ಕ್ಕೂ ಹೆಚ್ಚು ಕಂಪನಿಗಳು ನೋಂದಣಿ ಮಾಡಿಕೊಂಡಿವೆ. ಇನ್ನಷ್ಟು ಕಂಪನಿಗಳು ಬರುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.

‘ಸಂದರ್ಶನ ಎದುರಿಸುವ, ಸಂಹವನ ಕೌಶಲ ಕುರಿತು ಉದ್ಯೋಗಾಕಾಂಕ್ಷಿಗಳಿಗೆ ತಾಲ್ಲೂಕುವಾರ ಪೂರ್ವಭಾವಿ ತರಬೇತಿ ನೀಡಲಾಗುತ್ತಿದೆ. ಎಲ್ಲೆಡೆ 500ರಿಂದ 800ಕ್ಕೂ ಹೆಚ್ಚು ಮಂದಿ ಭಾಗವಹಿಸುತ್ತಿದ್ದಾರೆ. 37ಐಟಿಐ, 12ಕಾಲೇಜು, ಬೆಂಗಳೂರು ಉತ್ತರ ವಿ.ವಿ ಸೇರಿದಂತೆ ಎಲ್ಲೆಡೆ ವ್ಯಾಪಕ ಪ್ರಚಾರ ನೀಡಲಾಗಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ’ ಎಂದು ಹೇಳಿದರು.

ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್, ಕಂದಾಯ ನಿರೀಕ್ಷಕ ಚಂದ್ರಶೇಖರ್, ವ್ಯವಸ್ಥಾಪಕ ತ್ಯಾಗರಾಜ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT