ಕೋಲಾರ: ‘ಸಮಾಜದ ಏಳಿಗೆಗೆ ಸರ್ಕಾರಿ ನೌಕರರ ಸಂಘಗಳ ಸದಸ್ಯರು ಕೈಜೋಡಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನೌಕರರ ಸಂಘವು ನಗರದ ನಲ್ಲೂರಮ್ಮ ಅನಾಥ ಆಶ್ರಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣರ ಜಯಂತಿಯಲ್ಲಿ ಮಾತನಾಡಿ, ‘ಸಂಘ ಸಂಸ್ಥೆಗಳು ಅನಾಥ ಮಕ್ಕಳಿಗೆ ನೀಡಬೇಕು’ ಎಂದು ಹೇಳಿದರು.

‘ಸಮುದಾಯದ ಮಕ್ಕಳ ಜತೆಗೆ ಬೇರೆ ಸಮುದಾಯದ ಅನಾಥ ಮಕ್ಕಳನ್ನು ಪೋಷಿಸುವ ಕೆಲಸ ಆಗಬೇಕು. ಮಕ್ಕಳ ಶಿಕ್ಷಣಕ್ಕೆ ಹಣಕಾಸು ನೆರವು ನೀಡಬೇಕು. ಮಕ್ಕಳು ಶಿಕ್ಷಣದ ಮೂಲಕ ಸತ್ಪ್ರಜೆಗಳಾಗಬೇಕು. ಸಾಮಾಜಿಕ ಬದಲಾವಣೆಗೆ ಶಿಕ್ಷಣವು ಪ್ರಬಲ ಅಸ್ತ್ರ’ ಎಂದು ಅಭಿಪ್ರಾಯಪಟ್ಟರು.

‘ಅನಾಥ ಆಶ್ರಮದ ಏಳಿಗೆಗೆ ಕಾನೂನಿನ ವ್ಯಾಪ್ತಿಯಲ್ಲಿ ಎಲ್ಲಾ ಸಹಕಾರ ಕೊಡುತ್ತೇವೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಶಿವಸ್ವಾಮಿ ಭರವಸೆ ನೀಡಿದರು.

ಕೊರೊನಾ ವಾರಿಯರ್ಸ್‌ಗಳನ್ನು ಸನ್ಮಾನಿಸಲಾಯಿತು. ಅನಾಥಾಶ್ರಮದ ಮಕ್ಕಳಿಗೆ ಬಟ್ಟೆ ವಿತರಿಸಲಾಯಿತು. ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಓಂಶಕ್ತಿ ಚಲಪತಿ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಮುನಿಯಪ್ಪ, ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ದಿನೇಶ್, ಕೆಎಸ್ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎಸ್.ಚಂದ್ರಶೇಖರ್, ಕರ್ನಾಟಕ ರಾಜ್ಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನೌಕರರ ಸಂಘದ ಅಧ್ಯಕ್ಷ ಎಂ.ಮುನಿರಾಜು, ನಗರಸಭೆ ಸದಸ್ಯ ಮಂಜುನಾಥ್ ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.