ಸೋಮವಾರ, ಆಗಸ್ಟ್ 2, 2021
28 °C

ಆರೋಪಿಗೆ ನ್ಯಾಯಾಂಗ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಬಂಗಾರಪೇಟೆ ತಹಶೀಲ್ದಾರ್‌ ಕೊಲೆ ಪ್ರಕರಣದ ಆರೋಪಿ ವೆಂಕಟಾಚಲಪತಿಗೆ ಕೊರೊನಾ ಸೋಂಕು ಇಲ್ಲವೆಂದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.

ಕೊರೊನಾ ಸೋಂಕಿನ ಸಂಬಂಧ ಶನಿವಾರ ರಾತ್ರಿ ಪ್ರಯೋಗಾಲಯದ ವರದಿ ಬಂದ ನಂತರ ಪೊಲೀಸರು ವೆಂಕಟಾಚಲಪತಿ ಮತ್ತು ಆತನ ಪತ್ನಿ ಹೇಮಾವತಿ ಅವರನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ ಬಂಗಾರಪೇಟೆ ಜೆಎಂಎಫ್‌ಸಿ ನ್ಯಾಯಾಧೀಶರ ಎದುರು ಹಾಜರುಪಡಿಸಿದರು. ಬಳಿಕ ನ್ಯಾಯಾಧೀಶರು ಆರೋಪಿ ಮತ್ತು ಆತನ ಪತ್ನಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದರು.

ಆ ನಂತರ ಬಿಗಿ ಪೊಲೀಸ್‌ ಭದ್ರತೆಯಲ್ಲಿ ವೆಂಕಟಾಚಲಪತಿಯನ್ನು ಕೆಜಿಎಫ್‌ ಕಾರಾಗೃಹಕ್ಕೆ ಮತ್ತು ಹೇಮಾವತಿ ಅವರನ್ನು ಕೋಲಾರ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು